ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಐವರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಘಟನೆ ನಡೆದಿರುವುದು ದಿನಾಂಕ: 12-07-2022 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲ ನಗರದಲ್ಲಿ. ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಅಂದಿನ ಡಿವೈಎಸ್ಪಿ ಶಾಂತವೀರ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದರು.
ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!
ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ದಾಳಿಯ ವೇಳೆ, ಪಶ್ಚಿಮ ಬಂಗಾಳ ಮೂಲದವರಾದ ಅಲೋಕ್ ಮಂಡಲ್ (34), ಶ್ರೀಬಾಷ್ ಸರ್ಕಾರ್ (20), ಅಮ್ರತ್ ಮಂಡಲ್ (27), ಶಂಕರ್ ಬ್ಯಾಪಾರಿ (28) ಮತ್ತು ಹರಧನ್ ಮಂಡಲ್ (32) ಎಂಬುವವರನ್ನು ಬಂಧಿಸಲಾಗಿತ್ತು. ಬಂಧಿತರಿಂದ 1 ಕೆಜಿ 564 ಗ್ರಾಂ ತೂಕದ ಮಾದಕ ವಸ್ತು ಗಾಂಜಾ, ರೂ 3,550/- ನಗದು, ಮತ್ತು 05 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಇದನ್ನು ಓದಿ: ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಪ್ರಕರಣದ ತನಿಖೆಯನ್ನು ಅಂದಿನ ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿ.ಐ. ಅಶ್ವತ್ ಗೌಡ ಅವರು ಪೂರೈಸಿ, ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಇದನ್ನು ಓದಿ: ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!
ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಶಿವಮೊಗ್ಗದಲ್ಲಿ ನಡೆದ ಪ್ರಕರಣದ ವಿಚಾರಣೆ ವೇಳೆ, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ. ಎಂ. ಅವರು ಸಮರ್ಥವಾಗಿ ವಾದ ಮಂಡಿಸಿದರು. ಆರೋಪಿತರ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಶ್ರೀ ಮಂಜುನಾಥ್ ನಾಯಕ್ ಅವರು ದಿನಾಂಕ: 16-07-2025 ರಂದು ತೀರ್ಪು ಪ್ರಕಟಿಸಿದ್ದಾರೆ. ಆರೋಪಿಗಳಿಗೆ 4 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ಪ್ರತಿಯೊಬ್ಬರಿಗೆ ರೂ 25,000/- ದಂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 06 ತಿಂಗಳು ಸಾಮಾನ್ಯ ಕಾರಾವಾಸ ಶಿಕ್ಷೆಯನ್ನು ಅನುಭವಿಸಬೇಕೆಂದು ಆದೇಶಿಸಿದ್ದಾರೆ.
ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!
ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply