ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಎಸ್‌ಐಟಿ ರಚನೆ ಸ್ವಾಗತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್!

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸ್ವಾಗತಿಸಿದೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಕರುನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳ ಗ್ರಾಮವು ಸತ್ಯ, ಧರ್ಮ, ನ್ಯಾಯ ಮತ್ತು ಸೇವಾ ತತ್ವಗಳೊಂದಿಗೆ ಅಪಾರ ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಇತ್ತೀಚೆಗೆ ವ್ಯಕ್ತಿಯೊಬ್ಬರು ಧರ್ಮಸ್ಥಳದಲ್ಲಿ ಹಲವು ಮಹಿಳೆಯರ ಶವಗಳನ್ನು ಮಣ್ಣು ಮಾಡಿರುವ ಬಗ್ಗೆ ಪಾಪ ಪ್ರಜ್ಞೆಯಿಂದ ತಾನು ಮಣ್ಣು ಮಾಡಿದ ಸ್ಥಳವನ್ನು ತೋರಿಸುವುದಾಗಿ ಮುಂದೆ ಬಂದಿದ್ದರು. ಇದರ ಅನ್ವಯ ಪೊಲೀಸರು ಭಾರತೀಯ ನ್ಯಾಯ ಸಂಹಿತೆ 211(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಈ ಸಂಬಂಧವಾಗಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಐಪಿಎಸ್ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿರುವುದನ್ನು ಎಬಿವಿಪಿ ಸ್ವಾಗತಿಸಿದೆ. ಇದೇ ಸಂದರ್ಭದಲ್ಲಿ, ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಹತ್ಯೆ, ದೌರ್ಜನ್ಯ ಪ್ರಕರಣಗಳು ಹಾಗೂ ಅಸಹಜ ಸಾವಿನ ಪ್ರಕರಣಗಳಿಗೆ ತಾರ್ಕಿಕ ಅಂತ್ಯ ನೀಡುವುದು ಈ ಎಸ್‌ಐಟಿ ರಚನೆಯ ಮುಖ್ಯ ಉದ್ದೇಶವಾಗಿರಬೇಕು ಎಂದು ವಿದ್ಯಾರ್ಥಿ ಪರಿಷತ್ ಹೇಳಿದೆ.

ಇದನ್ನು ಓದಿ: ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್‌ ಮನವಿ!

“ಈ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರದ ಪವಿತ್ರತೆ ಮತ್ತು ನಂಬಿಕೆಗೆ ಯಾವುದೇ ಕುಂದು ಉಂಟಾಗದಂತೆ ಎಸ್‌ಐಟಿ ತನ್ನ ಕಾರ್ಯವನ್ನು ಸತ್ಯ ಮತ್ತು ನ್ಯಾಯದ ಪರವಾಗಿ ನಿರ್ವಹಿಸಿ, ಧರ್ಮಸ್ಥಳ ಪ್ರಕರಣದ ಸುತ್ತ ಹುಟ್ಟಿಕೊಂಡಿರುವ ಹಲವಾರು ಊಹಾಪೋಹಗಳು ಮತ್ತು ಅನುಮಾನಗಳಿಗೆ ಸಮರ್ಪಕ ಉತ್ತರ ಕಂಡುಕೊಳ್ಳಬೇಕು “

– ವಿದ್ಯಾರ್ಥಿ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಪ್ರವೀಣ್ ಹೆಚ್.ಕೆ. ಅವರು ಆಗ್ರಹಿಸಿದ್ದಾರೆ.

ಇದನ್ನು ಓದಿ: ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ! ಆದೇಶದ ಪ್ರತಿ ಇಲ್ಲಿದೆ ನೋಡಿ!!

 

 

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.