ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿ; ರೋಗಿಗಳ ಸಮಸ್ಯೆ ಆಲಿಸಿ ಸಚಿವರು ಕೊಟ್ಟ ಸೂಚನೆಗಳೇನು?

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಇಂದು (ಸೋಮವಾರ, ಜುಲೈ 21, 2025) ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಸಚಿವರು ಆಸ್ಪತ್ರೆಯ ಹೊರರೋಗಿ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ, ಜನರಲ್ ಮೆಡಿಸಿನ್ ವಾರ್ಡ್ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿದರು. ಈ ವೇಳೆ ರೋಗಿಗಳು, ಸಾರ್ವಜನಿಕರು ಹಾಗೂ ಆಸ್ಪತ್ರೆಯ ನಾನ್ ಕ್ಲಿನಿಕಲ್ ಸಿಬ್ಬಂದಿಯೊಂದಿಗೆ ಮಾತನಾಡಿ ಅವರ ಕುಂದು ಕೊರತೆಗಳನ್ನು ಆಲಿಸಿದರು. ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಮಾಹಿತಿ ಹಾಗೂ ಎಂಆರ್‌ಐ ಸ್ಕ್ಯಾನ್ ಸೇರಿದಂತೆ ವಿವಿಧ ವಿಭಾಗಗಳ ಮಾಹಿತಿ ನೀಡುವಂತೆ ಸೂಚನೆ ನೀಡಿದರು.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಮ್ಸ್ ನಿರ್ದೇಶಕರು ವಿರೂಪಾಕ್ಷಪ್ಪ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್, ಮುಖಂಡರು, ವೈದ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನು ಓದಿ: ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್‌ ಮನವಿ!

ಅಧಿಕಾರಿಗಳೊಂದಿಗೆ ಸಭೆ:

ವೀಕ್ಷಣೆಯ ನಂತರ ಉಸ್ತುವಾರಿ ಸಚಿವರು ಆಸ್ಪತ್ರೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ, ಹೊಸ ಒಪಿಡಿ ಕೌಂಟರ್ ನಿರ್ಮಾಣಕ್ಕೆ ಅಂದಾಜುಪಟ್ಟಿ ಸಿದ್ಧಪಡಿಸಲು, 5 ಡಯಾಲಿಸಿಸ್ ಯಂತ್ರಗಳ ಖರೀದಿ ಹಾಗೂ ಡಾರ್ಮೆಟರಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದರು

ಇದನ್ನು ಓದಿ: ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ! ಆದೇಶದ ಪ್ರತಿ ಇಲ್ಲಿದೆ ನೋಡಿ!!

ತಾಯಿ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಹೊರ ಜಿಲ್ಲೆಗಳಿಂದ ಬರುವ ಗರ್ಭಿಣಿಯರು ಇಲ್ಲಿ ಪ್ರಸವವಾಗುವ ಕುರಿತಾದ ಮಾಹಿತಿಯನ್ನು ನೀಡಲು ತಿಳಿಸಿದರು.

ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೆಂಟಿಲೇಟರ್‌ಗಳ ಮಾಹಿತಿ, ಎನ್ಐಸಿಯು ಎಂಸಿಹೆಚ್ (ತಾಯಿ ಮತ್ತು ಮಕ್ಕಳ ವಿಭಾಗ) ಬ್ಲಾಕ್ ವಿವರ, ಒಬಿಜಿ, ಪೀಡಿಯಾಟ್ರಿಕ್ ಸೇರಿದಂತೆ ವಿವಿಧ ವಿಭಾಗಗಳಲ್ಲಿನ ನೀರು ಲೀಕೇಜ್ ಸಮಸ್ಯೆ ಹಾಗೂ ಆಸ್ಪತ್ರೆಯ ಒಟ್ಟಾರೆ ಸಮಸ್ಯೆಗಳು ಮತ್ತು ಅಗತ್ಯವಿರುವ ಸೌಲಭ್ಯಗಳ ಕುರಿತು ಪ್ರಸ್ತಾವನೆ ಸಿದ್ಧಪಡಿಸಲು ಸೂಚನೆ ನೀಡಿದರು. ಈ ಕುರಿತು ಜುಲೈ 23, 2025 ರಂದು ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸುವುದಾಗಿ ಸಚಿವರು ಭರವಸೆ ನೀಡಿದರು.

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.