ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ! ನದಿಪಾತ್ರದ ಜನರಿಗೆ ಕೆಪಿಸಿಯಿಂದ 2ನೇ ಎಚ್ಚರಿಕೆ

ಸಾಗರ: ತಾಲೂಕಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ಸಮೀಪಿಸುತ್ತಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮ (KPCL) ಎರಡನೇ ಬಾರಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ, ನದಿ ಪಾತ್ರದಲ್ಲಿ ವಾಸಿಸುವ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳಾಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 1807 ಅಡಿಗಳಿಗೆ ತಲುಪಿದೆ. ಜಲಾಶಯಕ್ಕೆ ಸುಮಾರು 52 ಸಾವಿರ ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಪ್ರತಿದಿನ ಸುಮಾರು ಎರಡು ಟಿಎಂಸಿ ನೀರು ಹರಿದು ಬರುತ್ತಿದೆ.

ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

 

ಪ್ರಸ್ತುತ ಒಳಹರಿವು ಹೀಗೆಯೇ ಮುಂದುವರಿದರೆ, ಜಲಾಶಯದ ನೀರಿನ ಮಟ್ಟ ಶೀಘ್ರವಾಗಿ ಗರಿಷ್ಠ ಮಟ್ಟವನ್ನು ತಲುಪಲಿದೆ. ಜಲಾಶಯದ ಸುರಕ್ಷತೆ ದೃಷ್ಟಿಯಿಂದ 1816 ಅಡಿ ತಲುಪಿದ ತಕ್ಷಣ ಗೇಟ್‌ಗಳ ಮೂಲಕ ನೀರನ್ನು ಹೊರಬಿಡಲಾಗುತ್ತದೆ ಎಂದು ಕೆಪಿಸಿಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಸೂಚನೆ:

  • ನದಿ ಪಾತ್ರದ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಿ.
  • ಪ್ರವಾಸಿಗರು ಮತ್ತು ಸಾರ್ವಜನಿಕರು ನದಿಗೆ ಇಳಿಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಹೆಚ್ಚಿನ ಮಾಹಿತಿ ಹಾಗೂ ಜಿಲ್ಲೆಯ ಇತ್ತೀಚಿನ ಅಪ್‌ಡೇಟ್‌ಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ಪುಟವನ್ನು ಲೈಕ್ ಮಾಡಿ ಮತ್ತು ಫಾಲೋ ಮಾಡಿ.

ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಇದನ್ನು ಓದಿ:  ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?

ಜಾಹಿರಾತು:

 

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.