ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ! ಎಲ್ಲೆಲ್ಲಿ ಕಾಲೇಜುಗಳಿಗೆ ರಜೆ? ತಿಳಿಯಲು ಪೂರ್ತಿ ಓದಿ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ 7 ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲಾ ಕಾಲೇಜುಗಳಿಗೆ ನಾಳೆ, ಅಂದರೆ 2025ರ ಜುಲೈ 26ರಂದು ರಜೆ ಘೋಷಿಸಲಾಗಿದೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಹೊಸನಗರ: 

ಇಂದು ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ದಿನಾಂಕ 26.07.2025 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ, ಮುಂದಿನ ರಜಾ ದಿವಸಗಳಲ್ಲಿ ಶಾಲೆಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಆದೇಶಿಸಿದೆ.

ತಹಶೀಲ್ದಾರ, ಹೊಸನಗರ ತಾಲೂಕು

ತೀರ್ಥಹಳ್ಳಿ:

       ತೀರ್ಥಹಳ್ಳಿ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.

ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ.ತೀರ್ಥಹಳ್ಳಿ ತಾಲ್ಲೂಕು.

ಶಿವಮೊಗ್ಗ:

       ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.

ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ.ಶಿವಮೊಗ್ಗ ತಾಲ್ಲೂಕು.

ಶಿಕಾರಿಪುರ:

ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಪಿಯು ಕಾಲೇಜ್ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ನಿರಂತರ ಮಳೆ ಇರುವುದರಿಂದ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ತಹಸೀಲ್ದಾರ್ ಆದೇಶಿಸಿದ್ದಾರೆ.

ಭದ್ರಾವತಿ:

ಭದ್ರಾವತಿ ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಸುರಿಯುತ್ತಿರುವ ಬಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಭದ್ರಾವತಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ಮತ್ತು ಪಿಯು ಕಾಲೇಜುಗಳಿಗೆ ಜು.26ರ ಶನಿವಾರ ರಜೆ ಘೋಷಿಸಿದೆ. ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಆದೇಶದಲ್ಲಿ ತಿಳಿಸಿದ್ದಾರೆ.

ಸೊರಬ:

ಭಾರಿ ಮಳೆ ಹಿನ್ನೆಲೆಯಲ್ಲಿ ಸೊರಬ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶನಿವಾರ ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ.

ಸಾಗರ:

ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜು. 26ರ ಶನಿವಾರ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಸೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ರಜಾ ದಿನಗಳಲ್ಲಿ ಶಾಲೆಗಳನ್ನು ನಡೆಸಿ, ಪಾಠ ಪ್ರವಚನಗಳನ್ನು ಸರಿದೂಗಿಸಲು ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಸೂಚಿಸಿದ್ದಾರೆ.

ಹೆಚ್ಚಿನ ಮಾಹಿತಿ ಹಾಗೂ ಜಿಲ್ಲೆಯ ಇತ್ತೀಚಿನ ಅಪ್‌ಡೇಟ್‌ಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ಪುಟವನ್ನು ಲೈಕ್ ಮಾಡಿ ಮತ್ತು ಫಾಲೋ ಮಾಡಿ.

ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಇದನ್ನು ಓದಿ:  ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?

ಜಾಹಿರಾತು:

 

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.