ಶಿವಮೊಗ್ಗದಿಂದ ಮುಂಬೈಗೆ ತುರ್ತು ಏರ್‌ಲಿಫ್ಟ್: 21ರ ಹರೆಯದ ಯುವತಿ ಬದುಕುಳಿಯುವರೇ? ಏನಿದು ಗಂಭೀರ ಕಾಯಿಲೆ? 🚨

ಶಿವಮೊಗ್ಗ: ಶಿವಮೊಗ್ಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ!

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪ ಕೊಪ್ಪಲು ಗ್ರಾಮದ ನಿವಾಸಿ, ಮನೋಜ್-ಮನಿಷಾ ದಂಪತಿಯ ಪುತ್ರಿ ಮಾನ್ಯ (21), ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡು, ಮೆದುಳು ಜ್ವರದ ಜೊತೆಗೆ ಲಿವರ್ ಡ್ಯಾಮೇಜ್ ಸಹ ಕಂಡುಬಂದಿದೆ. ವೈದ್ಯರ ಸಲಹೆಯಂತೆ ತುರ್ತು ಚಿಕಿತ್ಸೆಗಾಗಿ ಅವರನ್ನು ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿಕೊಡಲಾಗಿದೆ.

ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಏನಿದು ಪ್ರಕರಣ?

ಇಂಟೀರಿಯರ್ ಡಿಸೈನರ್ ಆಗಿರುವ ಮಾನ್ಯ, ಟ್ರಾವೆಲ್ ಮಾಡಿ ಬಂದ ನಂತರ ಜ್ವರ ಕಾಣಿಸಿಕೊಂಡಿತ್ತು. 7 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು, ಮೊದಲು ಬೇರೆ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಮಂಗಳವಾರ ಅಮೃತ ಲೈಫ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ನಂಜಪ್ಪ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾಗ ರಕ್ತ ಪರೀಕ್ಷೆಯಲ್ಲಿ ಲಿವರ್ ಸಮಸ್ಯೆ ಕಂಡುಬಂದಿದೆ. ವೈದ್ಯರ ಪ್ರಕಾರ, ಮಾನ್ಯಗೆ ವೆಂಟಿಲೇಟರ್ ಬೆಂಬಲ ಬೇಕಿದ್ದು, ಲಿವರ್ ಫೇಲ್ಯೂರ್ ಆಗುವ ಸಾಧ್ಯತೆ ಇರುವುದರಿಂದ ಲಿವರ್ ಟ್ರಾನ್ಸ್‌ಪ್ಲಾಂಟ್ ಅಗತ್ಯವಿದೆ ಎಂದು ತಿಳಿದುಬಂದಿದೆ. ಡೆಂಗ್ಯೂ ಪ್ರಕರಣಗಳಲ್ಲಿ ಶೇ. 1ರಷ್ಟು ಮಾತ್ರ ಈ ರೀತಿ ಲಿವರ್ ಡ್ಯಾಮೇಜ್ ಕಂಡುಬರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಶಿವಮೊಗ್ಗ ಪೊಲೀಸರಿಂದ ‘ಜೀರೋ ಟ್ರಾಫಿಕ್’ ವ್ಯವಸ್ಥೆ!

ಮಾನ್ಯ ಅವರನ್ನು ಖಾಸಗಿ ಆಸ್ಪತ್ರೆಯಿಂದ ವಿಮಾನ ನಿಲ್ದಾಣಕ್ಕೆ ಸಾಗಿಸಲು ಶಿವಮೊಗ್ಗ ಪೊಲೀಸರು ತ್ವರಿತವಾಗಿ ‘ಜೀರೋ ಟ್ರಾಫಿಕ್’ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದರಿಂದಾಗಿ ಯಾವುದೇ ಅಡೆತಡೆಯಿಲ್ಲದೆ ಯುವತಿಯನ್ನು ಸಕಾಲದಲ್ಲಿ ವಿಮಾನ ನಿಲ್ದಾಣಕ್ಕೆ ತಲುಪಿಸಲು ಸಾಧ್ಯವಾಯಿತು.

ಮಾನ್ಯ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸೋಣ. ಈ ಬಗ್ಗೆ ನಿಮ್ಮ ಅನಿಸಿಕೆಗಳೇನು?

ಇದನ್ನು ಓದಿ:  ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.