BREAKING: ‘ನಮ್ಮ ಮೆಟ್ರೋ’ಗೆ ‘ಬಸವ ಮೆಟ್ರೋ’ ಹೆಸರಿಡಲು ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಫಾರಸ್ಸು!

ಬೆಂಗಳೂರು: ವಿಶ್ವಗುರು ಬಸವಣ್ಣ ಅವರನ್ನು ‘ಕರ್ನಾಟಕ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ವರ್ಷಾಚರಣೆಯ ಬೃಹತ್ ಸಮಾರೋಪ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಮಹತ್ವದ ಮೂಲಸೌಕರ್ಯ ಯೋಜನೆಗೆ ಬಸವಣ್ಣನವರ ಹೆಸರಿಡುವ ಐತಿಹಾಸಿಕ ತೀರ್ಮಾನ ಪ್ರಕಟಿಸಿದ್ದಾರೆ. ಬೆಂಗಳೂರಿನ ‘ನಮ್ಮ ಮೆಟ್ರೋ’ ಯೋಜನೆಗೆ “ಬಸವ ಮೆಟ್ರೋ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

“ಈ ಯೋಜನೆ ಸಂಪೂರ್ಣವಾಗಿ ರಾಜ್ಯ ಸರ್ಕಾರದ ಅಧೀನದಲ್ಲಿ ಇರುತ್ತಿದ್ದರೆ, ಇವತ್ತೇ ನಾನು ಅದನ್ನು ‘ಬಸವ ಮೆಟ್ರೋ’ ಎಂದು ಘೋಷಿಸಿಬಿಡುತ್ತಿದ್ದೆ” ಎಂದು ಸಿಎಂ ಹೇಳಿದ್ದು, ಅವರ ಬಸವ ತತ್ವದ ಬದ್ಧತೆಯನ್ನು ಎತ್ತಿ ತೋರಿಸಿದೆ.

ಬಸವ ತತ್ವವೇ ನನ್ನ ರಾಜಧರ್ಮ: ಸಿಎಂ ಘೋಷಣೆ

ಶರಣ ಸಂಸ್ಕೃತಿಯ 301 ಶರಣರು, ಗುರುಗಳು ಮತ್ತು ಸುಮಾರು 2 ಲಕ್ಷಕ್ಕೂ ಅಧಿಕ ಜನಸಮೂಹದ ಸಮ್ಮುಖದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ತಮ್ಮ ಆಡಳಿತದ ಮೂಲವೇ ಬಸವಣ್ಣನವರ ತತ್ವಗಳು ಎಂಬುದನ್ನು ಸ್ಪಷ್ಟಪಡಿಸಿದರು.

“ನಾನು ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಅಂದಿನಿಂದಲೇ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ‘ಭಾಗ್ಯ’ಗಳ ಹಾಗೂ ಗ್ಯಾರಂಟಿಗಳ ಮೂಲಕ ಎಲ್ಲ ಜಾತಿ-ಧರ್ಮದ ಬಡವರಿಗೆ ಸಮಾನ ಅವಕಾಶ ಕಲ್ಪಿಸಿದೆ” ಎಂದು ಅವರು ಸಮರ್ಥಿಸಿಕೊಂಡರು. ಇದೇ ಕಾರಣಕ್ಕಾಗಿ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಲಾಗಿದೆ ಎಂದರು.

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಜಾತಿ ವ್ಯವಸ್ಥೆಯ ವಿರುದ್ಧ ಸಿಎಂ ವಾಗ್ದಾಳಿ

ಜಾತಿ ವ್ಯವಸ್ಥೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಸಿಎಂ, ಜಾತಿ ಆಧಾರದ ಮೇಲೆ ಶ್ರೇಷ್ಠತೆ ಅಥವಾ ಪ್ರತಿಭೆಯನ್ನು ನಿರ್ಧರಿಸುವುದನ್ನು ತೀವ್ರವಾಗಿ ಖಂಡಿಸಿದರು. “ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ” ಎಂದು ಗುಡುಗಿದರು.

  • ಸಂವಿಧಾನ ಹಾಗೂ ಶರಣ ಸಂಸ್ಕೃತಿ ಒಂದೇ: “ನಾನು ಕಾನೂನು ವಿದ್ಯಾರ್ಥಿಯಾದಾಗಿನಿಂದಲೂ ಬಸವಣ್ಣನವರ ಅನುಯಾಯಿ. ಡಾ. ಅಂಬೇಡ್ಕರ್ ಅವರ ಸಂವಿಧಾನ ಮತ್ತು ಶರಣ ಸಂಸ್ಕೃತಿಯ ಆಶಯಗಳು ಒಂದೇ ಆಗಿವೆ. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಬಸವಣ್ಣನವರ ಕನಸಾಗಿತ್ತು.”
  • ಶೂದ್ರ ಸಮುದಾಯಕ್ಕೆ ಕರೆ: ಚಾತುವರ್ಣ ವ್ಯವಸ್ಥೆಯಲ್ಲಿರುವ ‘ಶೂದ್ರರು’ ಜಾತಿ ಯಾವುದೇ ಆದರೂ, ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದು ಕರೆ ನೀಡಿದರು.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ವಚನ ವಿಶ್ವವಿದ್ಯಾಲಯ ಸ್ಥಾಪನೆಯ ಬೇಡಿಕೆಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷವೇ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹತ್ವದ ಭರವಸೆ ನೀಡಿದರು.

ಮೆಟ್ರೋಗೆ ಬಸವಣ್ಣನವರ ಹೆಸರಿಡಲು ಕೇಂದ್ರ ಒಪ್ಪಿಗೆ ನೀಡಬಹುದೇ? ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ಈ ನಿರ್ಧಾರವು ಯಾವ ರೀತಿಯ ಪರಿಣಾಮ ಬೀರಬಹುದು? ನಿಮ್ಮ ಅಭಿಪ್ರಾಯವೇನು?

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.