ಶಿವಮೊಗ್ಗ : ಆಡಳಿತ ವರ್ಗಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದೂ ಒಟ್ಟು 21 ಐಎಎಸ್ ಅಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಎಲ್ಲ ಅಧಿಕಾರಿಗಳು ತಕ್ಷಣವೇ ನೂತನ ಜಾಗಗಳಿಗೆ ರೀಪೋರ್ಟ್ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೆಶ್ ಕುಮಾರ್ ಎಸ್ ನಿರ್ದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ( ಸಿಇಓ ) ಕಾರ್ಯ ನಿರ್ವಹಿಸುತ್ತಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ ಅವರನ್ನು ವರ್ಗಾವಣೆ ಮಾಡಿ...
Category: District News
ಶಿವಮೊಗ್ಗ : ಸೇನೆಗೆ ಸೇರ ಬಯಸುವವರಿಗೆ ಅಗ್ನಿವೀರ್ ಪರೀಕ್ಷೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಆನ್‍ಲೈನ್ https://agnipathvayu.cdac.in ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ...
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಭೇಟಿ !
ಭದ್ರಾವತಿ : ಇಂದು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದು ಕಾರ್ಖಾನೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಚಿವ ಕುಮಾರಸ್ವಾಮಿ ಕಾರ್ಖಾನೆಯ ಆವರಣದ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಐಎಸ್‌ಎಲ್ ಕಾರ್ಖಾನೆಯ ಪುನಶ್ಚೇತನ, ಬಂಡವಾಳ, ವಿವಿಧ ವಿಭಾಗಗಳ ಪುನಾರಂಭ, ಉತ್ಪಾದನೆ, ಗಣಿ ಸೇರಿ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕುಮಾರಸ್ವಾಮಿ...
ಟಿ-20 ವಿಶ್ವ ಕಪ್ ಮುಡಿಗೇರಿಸಿಕೊಂಡ ಭಾರತ ! 17 ವರ್ಷಗಳ ನಂತ್ರ ಟಿ20 ವಿಶ್ವಕಪ್ ಗೆದ್ದ ರೋಹಿತ್ ಪಡೆ !
ಸ್ಪೋರ್ಟ್ಸ್ : ಚೋಕರ್ಸ್ vs ಚೋಕರ್ಸ್ (Chokers) ಅಂತಾಲೇ ಬಿಂಬಿಸಲಾಗಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ. 17 ವರ್ಷಗಳ ಬಳಿಕ ಟೀಂ ಇಂಡಿಯಾ ಐಸಿಸಿ ವಿಶ್ವಕಪ್‌ಗೆ ಮುತ್ತಿಟ್ಟಿದೆ. ಸೌತ್ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ ಟೀಂ ಇಂಡಿಯಾ ಮತ್ತೆ ಚಾಂಪಿಯನ್ ಆಗಿದೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಸೋತಿತ್ತು. ಆದ್ರೀಗ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಮತ್ತೆ ಚಾಂಪಿಯನ್ ಆಗಿದೆ. ಇಂದಿನ ರಣರೋಚಕ ಪಂದ್ಯದಲ್ಲಿ ಟೀಂ ಇಂಡಿಯಾ...
ಟ್ರಾಫಿಕ್ ಉಲ್ಲಂಘನೆ ಮಾಡಿದ ಆಟೋ ಚಾಲಕರಿಗೆ ಠಾಣೆಯ ಮುಂದೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು !
ಶಿವಮೊಗ್ಗ : ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಟ್ರಾಫಿಕ್ ಉಲ್ಲಂಘನೆ ಮಾಡಿದ ಆಟೋ ಚಾಲಕರಿಗೆ ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ವಿವಿಧೆಡೆ ಸಂಚಾರ ನಿಯಮ ಉಲ್ಲಂಘಿಸಿದ 25 ಆಟೋಗಳನ್ನು ವಶಕ್ಕೆ ಪಡೆಯಲಾಯಿತು.ಆಟೋಗಳ ದಾಖಲೆ ಪರಿಶೀಲಿಸಿದ ಸಂಚಾರ ಪೊಲೀಸರು, ದಂಡ ವಿಧಿಸಿದರು. ಬಳಿಕ ಆಟೋ ಚಾಲಕರಿಂದ ಪ್ರಮಾಣ ಮಾಡಿಸಿದರು. “ಇನ್ಮುಂದೆ ಸಂಚಾರ ನಿಯಮ ಉಲ್ಲಂಘನೆ ಮಾಡುವುದಿಲ್ಲ.ಆಟೋಗೆ ಸಂಬಂಧಿಸಿದ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುತ್ತೇನೆ ಎಂದು ದೇವರ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದು...
ಹಾವೇರಿ ಘಟನೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಅಪಘಾತ ! ಆಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾಗಿ ಮೂವರ ಸಾವು !
ಶಿವಮೊಗ್ಗ : ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಅಂಬುಲೆನ್ಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ. ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಮೃತ ದುರ್ದೈವಿಗಳು. ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳು ಎನ್ನಲಾಗುತ್ತಿದೆ. ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ...
ಹಾವೇರಿ ದುರ್ಘಟನೆ : ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿ ಎಂ ಸಿದ್ದರಾಮಯ್ಯ !
ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು. ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ...
ಹಾವೇರಿ ಘಟನೆ : ಎಮ್ಮೆಹಟ್ಟಿ ಗ್ರಾಮದಲ್ಲಿ 9 ಜನರ ಸಾಮೂಹಿಕ ಅಂತ್ಯಸಂಸ್ಕಾರ !
ಭದ್ರಾವತಿ : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಜನರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದಲ್ಲಿ ನೆರವೇರಿಸಲಾಯಿತು. ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಅದರಲ್ಲಿ 9 ಮಂದಿಯನ್ನು ಸಾಮೂಹಿಕ ಅಂತ್ಯಸಂಸ್ಕಾರ ಮಾಡಲಾಯಿತು. ಆದರ್ಶ್, ವಿಶಾಲಾಕ್ಷಿ, ನಾಗೇಶ್ ರಾವ್, ಸುಭದ್ರಾ ಬಾಯಿ, ಮಾನಸಾ, ರೂಪಾ ಬಾಯಿ, ಭಾಗ್ಯಬಾಯಿ, ಅರುಣ್ ಕುಮಾರ್, ಮಂಜುಳಾ ಒಟ್ಟು 9 ಮಂದಿಗೆ ಸಾಮೂಹಿಕವಾಗಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. 4 ಅಂಬುಲೆನ್ಸ್...
ಸಾಗರದ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಸಾಗರ: ದಾನದಲ್ಲಿ ಶ್ರೇಷ್ಠ ದಾನ ರಕ್ತದಾನವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ರಕ್ತದಾನ ಮಾಡುವ ಮೂಲಕ ಬದುಕಿನ ಸಾರ್ಥಕತೆ ಮೆರೆಯಿರಿ ಎಂದು ಸಾಗರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಣ್ಣ ಹನುಮಂತಪ್ಪ .ಜಿ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಾಗರದಲ್ಲಿ I Q A C, ಅಡಿಯಲ್ಲಿ ಯುವ ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಘಟಕದ ವತಿಯಿಂದ ಎನ್.ಎಸ್.ಎಸ್.ಮತ್ತು ಎನ್.ಸಿ. ಸಿ. ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರೋಟರಿ ರಕ್ತ ನಿಧಿ ಘಟಕ , ಸಾಗರ...
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ! ಗೆದ್ದು ಬೀಗಿದ ಕೈ ಪಾಳಯ !
ಶಿವಮೊಗ್ಗ : ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಿಗೆ ಸೋಲುಂಟಾಗಿದ್ದು, ಉಳಿದ 12 ಸ್ಥಾನಕ್ಕೆ ಚುನಾವಣೆ ನಡೆದಿದ್ದು,ಇದರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಆರ್.ಎಂ ಮಂಜುನಾಥ್ ಗೌಡ, ಬೇಳೂರು ಗೋಪಾಲ ಕೃಷ್ಣ, ದುಗ್ಗಪ್ಪ ಗೌಡ , ಹೆಚ್.ಎಲ್. ಷಡಕ್ಷರಿ, ಬಸವಾನಿ ವಿಜಯದೇವ್, ಎಸ್.ಪಿ ಚಂದ್ರಶೇಖರಗೌಡ, ಕೆ.ಪಿ ರುದ್ರೇಗೌಡ, ಮರಿಯಪ್ಪ, ಮಹಲಿಂಗ ಶಾಸಿ, ಸಿ ಹನುಮಂತ, ಜಿ.ಎಸ್ ಸುಧೀರ್ ಸೇರಿ...