ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯನ್ನು ಶೀಘ್ರವೇ ಮಾಡಬೇಕು. ರಾಷ್ಟ್ರ ಭಕ್ತರ ಬಳಗದಿಂದ ಪಾಲಿಕೆಯ 35 ವಾರ್ಡ್‌ಗಳಲ್ಲೂ ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ. ಪಾಲಿಕೆ ಚುನಾವಣೆಯಲ್ಲಿ ಹಿಂದುತ್ವಕ್ಕೆ ಮೊದಲ ಆದ್ಯತೆ. ವಾರ್ಡ್‌ಗಳ ನಡುವೆ ಜನಸಂಪರ್ಕ ಇರುವ ಅಭ್ಯರ್ಥಿಗೆ ಅವಕಾಶ ನೀಡಬೇಕೆಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಸುದ್ದಿಗೊಷ್ಟಿಯಲ್ಲಿ ತಿಳಿಸಿದರು. ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಿದೆ?. ಡಿಸಿಸಿ ಬ್ಯಾಂಕ್...
Category: Politics news
ಚುಂಚಾದ್ರಿ ಕಪ್ ವಾಲಿಬಾಲ್ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಬಂದಿದ್ದ ಉಸ್ತುವಾರಿ ಸಚಿವರು ಕೆಂಡಮಂಡಲರಾಗಿದ್ದೇಕೆ ?
ಶಿವಮೊಗ್ಗ : ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವಂತಹ ಚುಂಚಾದ್ರಿ ಕಪ್ ವಾಲಿಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭಕ್ಕೆ ಆಗಮಿಸಿದಂತಹ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ಅಧಿಕಾರಿಗಳ ಮೇಲೆ ಗರಂ ಆಗಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಉಸ್ತುವಾರಿ ಸಚಿವರು ಬರುವ ಮಾಹಿತಿಯನ್ನ ತಿಳಿದು ಸ್ಥಳದಲ್ಲಿ ನಡೆದಿದ್ದ ಸಾರ್ವಜನಿಕರು ಮತ್ತು ಕ್ರೀಡಾಪಟುಗಳು ಮಧು ಬಂಗಾರಪ್ಪನವರಿಗೆ ಕ್ರೀಡಾಂಗಣದ ಅವ್ಯವಸ್ಥೆ ಕುರಿತು ದೂರು ನೀಡಿದ್ದಾರೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಕೇಳಿದರೆ ಕ್ರೀಡಾ ಇಲಾಖೆ ಅಧಿಕಾರಿಗಳು ಉಡಾಫೆ ಉತ್ತರ ಕೊಡುತ್ತಾರೆ. ನೀವು (ಸಚಿವರು)...
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ ! ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು !
ಶಿವಮೊಗ್ಗ : ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ,...
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಭೇಟಿ !
ಭದ್ರಾವತಿ : ಇಂದು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದು ಕಾರ್ಖಾನೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಚಿವ ಕುಮಾರಸ್ವಾಮಿ ಕಾರ್ಖಾನೆಯ ಆವರಣದ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಐಎಸ್‌ಎಲ್ ಕಾರ್ಖಾನೆಯ ಪುನಶ್ಚೇತನ, ಬಂಡವಾಳ, ವಿವಿಧ ವಿಭಾಗಗಳ ಪುನಾರಂಭ, ಉತ್ಪಾದನೆ, ಗಣಿ ಸೇರಿ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕುಮಾರಸ್ವಾಮಿ...
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ! ಗೆದ್ದು ಬೀಗಿದ ಕೈ ಪಾಳಯ !
ಶಿವಮೊಗ್ಗ : ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಿಗೆ ಸೋಲುಂಟಾಗಿದ್ದು, ಉಳಿದ 12 ಸ್ಥಾನಕ್ಕೆ ಚುನಾವಣೆ ನಡೆದಿದ್ದು,ಇದರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಆರ್.ಎಂ ಮಂಜುನಾಥ್ ಗೌಡ, ಬೇಳೂರು ಗೋಪಾಲ ಕೃಷ್ಣ, ದುಗ್ಗಪ್ಪ ಗೌಡ , ಹೆಚ್.ಎಲ್. ಷಡಕ್ಷರಿ, ಬಸವಾನಿ ವಿಜಯದೇವ್, ಎಸ್.ಪಿ ಚಂದ್ರಶೇಖರಗೌಡ, ಕೆ.ಪಿ ರುದ್ರೇಗೌಡ, ಮರಿಯಪ್ಪ, ಮಹಲಿಂಗ ಶಾಸಿ, ಸಿ ಹನುಮಂತ, ಜಿ.ಎಸ್ ಸುಧೀರ್ ಸೇರಿ...
ಮತ್ತೆ ತವರಿಗೆ ವಾಪಸ್ ಆಗ್ತಾರಾ ಮಾಜಿ ಸಚಿವ ಕೆಎಸ್ಇ ? ಘರ್ ವಾಪಸಿ ಆಗ್ತಾರ ಈಶ್ವರಪ್ಪ ?
ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಮ್ಮ ಪುತ್ರ ಕೆ ಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಕಾರಣಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಬಿ ವೈ ರಾಘವೇಂದ್ರರ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು , ಈ ವೇಳೆಯೂ ಸಾಕಷ್ಟು ಬಿಜೆಪಿಯ ಮುಖಂಡರು ನಾಯಕರು ಕಾರ್ಯಕರ್ತರು ಕೆ ಎಸ್ ಈಶ್ವರಪ್ಪರ ಮನವೊಲಿಸಲು ಪ್ರಯತ್ನ ನಡೆಸಿದ್ದರು ಕೂಡ...
ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್‌ಫಿಟ್ – ಎಂ ಎಲ್ ಸಿ ಭೋಜೇಗೌಡ ಆಕ್ರೋಶ !
ಚಿಕ್ಕಮಗಳೂರು : ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ನ ಪರವಾಗಿ ವಾದ ಮಾಡುತ್ತಿರುವ ವಕೀಲರು ತಮ್ಮ ಕಕ್ಷಿದಾರ ಅಪರಾಧ ಮಾಡಿಲ್ಲವೆಂದು 100 ಸಲ ಹೇಳ್ತಾನೆ. ಆದರೆ, ಇವರು ಕಕ್ಷಿದಾರ ನಿರಪರಾಧಿ ಎಂದು ಕೋರ್ಟ್‌ನಲ್ಲಿ ಹೇಳಬೇಕು ಹೊರತು ಸಾರ್ವಜನಿಕವಾಗಿ ಹೇಳಬಾರದು. ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್‌ಫಿಟ್ ಆಗಿದ್ದಾರೆ ಎಂದು ಬಾರ್ ಕೌನ್ಸಿಲ್ ಮಾಜಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್...
BIG BREAKING NEWS : ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ಭಾನುಪ್ರಕಾಶ್ ಗೆ ಹೃದಯಘಾತದಿಂದ ನಿಧನ !
ಶಿವಮೊಗ್ಗ : ಬೆಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ನಡೆಸ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿಂದು ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸ್ತಿತ್ತು. ವಿಭಿನ್ನ ರೀತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣದ ಮಾಡಿದ ಮನೆಗೆ ಹೊರಟಿದ್ದ ಭಾನುಪ್ರಕಾಶ್‌ರವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ ಎಂಬ...
ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ ! ಕುದುರೆ ಏರಿ ಬಂದ ಡಿ ಎಸ್ ಅರುಣ್ !
ಶಿವಮೊಗ್ಗ : ಪೆಟ್ರೋಲ್, ಡೀಸೆಲ್ ಬೆಲೆ, ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಇಂದು ಶಿವಮೊಗ್ಗದ ಗೋಪಿ ವೃತ್ತದಲ್ಲಿ ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಇಂದು ಶಿವಮೊಗ್ಗ ಬಿಜೆಪಿಯಿಂದ ನಗರದ ಐದು ಕಡೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದರು, ಜೈಲ್ ರಸ್ತೆಯಲ್ಲಿ ಯುವಮೋರ್ಚಾದ ಕಾರ್ಯಕರ್ತರು ಸಿಎಂ ಸುಳ್ಳ ಡಿಸಿಎಂ ಕಳ್ಳ, ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ ಎಂಬ ಘೋಷಣೆ...
ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ !
ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಇಬ್ಬರಿಗೆ ಚೂರಿ ಇರಿಯಲಾಗಿದೆ,...