ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೈಂದೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕರ್ತರಿಗೆ ಚಿಕನ್ ಬಿರಿಯಾನಿ ಮಾಡಿಸಲಾಗಿತ್ತು. ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ಬಿರಿಯಾನಿಯನ್ನೇ ಎತ್ತಾಕಿಕೊಂಡು ಹೋಗಿದ್ದಾರೆ. ಬೈಂದೂರಿನಲ್ಲಿ ಸಮಾವೇಶ ಏರ್ಪಡಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಗೆ ಸಜ್ಜಾಗುತ್ತಿರುವ ಕೆ.ಎಸ್. ಈಶ್ವರಪ್ಪ...
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ?
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ? ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಯೋ.. ಬರ್ಕೊಳಯ್ಯ, ಶಿವಮೊಗ್ಗ ನಂದು : ಸಂತೆಕಡೂರಿನಲ್ಲಿ ಪತ್ನಿ ಪರ ಪ್ರಚಾರದಲ್ಲಿ ಶಿವಣ್ಣ ಮಾಸ್ ಡೈಲಾಗ್ !
ಯೋ.. ಬರ್ಕೊಳಯ್ಯ, ಶಿವಮೊಗ್ಗ ನಂದು : ಸಂತೆಕಡೂರಿನಲ್ಲಿ ಪತ್ನಿ ಪರ ಪ್ರಚಾರದಲ್ಲಿ ಶಿವಣ್ಣ ಮಾಸ್ ಡೈಲಾಗ್ ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಇಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು...
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ; ಆಯನೂರು ಮಂಜುನಾಥ್ ಗೆ ಟಿಕೆಟ್ !
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ; ಆಯನೂರು ಮಂಜುನಾಥ್ ಗೆ ಟಿಕೆಟ್ ! ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರ್ ಮಂಜುನಾಥ್ ಅವರನ್ನು ಗುರುವಾರ ಹೈಕಮಾಂಡ್ ಅಧಿಕೃತ ಘೋಷಣೆ ಮಾಡಿದೆ. ಮುಂಬರುವ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ ಪಾಳಯದಲ್ಲಿ ಇಬ್ಬರ ಹೆಸರು ಮುಂಚೂಣಿಯಲ್ಲಿತ್ತು.ಸತತವಾಗಿ ಎರಡು ಬಾರಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಎಸ್.ಪಿ ದಿನೇಶ್ ಮತ್ತು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟು...
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಭದ್ರಾವತಿಯ ಬಾರಂದೂರಿನಲ್ಲಿ ಗೀತಾ ಶಿವರಾಜಕುಮಾರ್ ಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಜೈಕಾರ ಹಾಕಿ, ಭವ್ಯ ಸ್ವಾಗತವನ್ನು ಕೋರಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ಲೋಕ ಸಭಾ ಚುನಾವಣೆ : ಶಸ್ತ್ರ/ ಆಯುಧಗಳ ಠೇವಣಿ ಇಡಲು ಸೂಚನೆ !
ಲೋಕ ಸಭಾ ಚುನಾವಣೆ : ಶಸ್ತ್ರ/ ಆಯುಧಗಳ ಠೇವಣಿ ಇಡಲು ಸೂಚನೆ ! ಶಿವಮೊಗ್ಗ : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್- 16 ರಿಂದ ಜೂನ್ 6 ರವರೆಗೆ ಜಾರಿಯಲ್ಲಿದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ, ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಕೂಡಲೇ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ...
ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು ! ಕುಮಾರ್ ಬಂಗಾರಪ್ಪ ಧಿಡೀರ್ ಪ್ರತ್ಯಕ್ಷ !
ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು ! ಕುಮಾರ್ ಬಂಗಾರಪ್ಪ ಧಿಡೀರ್ ಪ್ರತ್ಯಕ್ಷ ! ಶಿವಮೊಗ್ಗ : ಇಂದು ಶಿವಮೊಗ್ಗದ ಅಲ್ಲಮಹಾಪ್ರಭು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬೃಹತ್ ಬಹಿರಂಗ ಸಭೆಯನ್ನ ಆಯೋಜಿಸಲಾಗಿತ್ತು, ಸಭೆಯಲ್ಲಿ ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ನಾಯಕರು ಹಾಗೂ ಹಲವು ಬಿಜೆಪಿ ಮುಖಂಡರು ಉಪಸ್ಥಿತಿ ಇದ್ದು, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಾತ್ರ ಮೋದಿ ಕಾರ್ಯಕ್ರದಲ್ಲಿ ಕಾಣಿಸಲಿಲ್ಲ. ಅದೆಷ್ಟೋ ಬಿಜೆಪಿ ಕಾರ್ಯಕರ್ತರು ಈಶ್ವರಪ್ಪನವರು ಮನಸ್ಸು ಬದಲಾಯಿಸುತ್ತಾರೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ...
ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು !
ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು ! ಶಿವಮೊಗ್ಗದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದು, ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ವೇದಿಕೆಗೆ ಆಗಮಿಸಿದರು. ಈ...
ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ?
ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ? ಶಿವಮೊಗ್ಗ : ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ನಗರದ ಅಲ್ಲಮಪ್ರಭು ಮೈದಾನದ ಆವರಣ ಸಂಪೂರ್ಣ ಸಜ್ಜಾಗಿದೆ ಹೇಗಿದೆ ಬಂದೋಬಸ್ತ್ ? ಇನ್ನೂ ನಾಳೆ ಪ್ರಧಾನಮಂತ್ರಿ...
ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು !
ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು ! ಶಿವಮೊಗ್ಗ : ಮಾ.18ರಂದು ಅಂದರೆ ನಾಳೆ ಸೋಮವಾರದಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಶನಿವಾರ ಬೆಳಗ್ಗೆ ಕೇಸರಿಮಯ ಆಗಿದ್ದ ನಗರ ರಾತ್ರಿ ವೇಳೆಯೇ ಖಾಲಿ, ಖಾಲಿ ಎಂಬಂತಾಗಿತ್ತು. ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣೆ ಅಧಿಕಾರಿಗಳ ಸೂಚನೆಯಂತೆ ಎಲ್ಲ ಫೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ. ಶಿವಮೊಗ್ಗ ವಿಮಾನನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ( ಫ್ರೀಡಂ ಪಾರ್ಕ್ ) ರಸ್ತೆಯಲ್ಲಿ ಬಿಜೆಪಿ...
 
 









