ಶಿವಮೊಗ್ಗ : ದೇಶಾದ್ಯಂತ ಇಂದು 78 ನೇ ಸ್ವಾತಂತ್ರ್ಯೋತ್ಸವದ ( 78th independence day ) ಸಂಭ್ರಮ ಮನೆ ಮಾಡಿದ್ದು, ಇಂದು ಶಿವಮೊಗ್ಗ (shivamogga) ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಧ್ವಜಾರೋಹಣ ನೆರವೇರಿಸಿ. ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಕೋರಿದರು. ಧ್ವಜಾರೋಹಣದ ಮೂಲಕ ಸ್ವಾತಂತ್ರ್ಯೋತ್ಸವಕ್ಕೆ ಚಾಲನೆ ನೀಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಂತರ ತೆರೆದ ಜೀಪಿನಲ್ಲಿ 26 ತುಕುಡಿಗಳನ್ನು ಪರಿಶೀಲಿಸಿ ವಂದನೆಗೆ ಗೌರವ ವಂದನೆ ಸ್ವೀಕರಿಸಿದರು. ಕೆ.ಎಸ್.ಆರ್.ಪಿ, ಡಿ....
Category: State News
ಕಣ್ಮನ ಸೆಳೆಯುತ್ತಿದೆ ವಿಶ್ವ ವಿಖ್ಯಾತ ಜೋಗ ಜಲಪಾತ ! ಜೋಗದ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು !
ಶಿವಮೊಗ್ಗ : ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ, ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ, ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ….. ಜೋಗ ಜಲಪಾತವನ್ನು ನೋಡುವಾಗಲೆಲ್ಲ ಕನ್ನಡದ ಖ್ಯಾತ ಕವಿ ನಿಸಾರ್ ಅಹ್ಮದ್ ಅವರ ನಿತ್ಯೋತ್ಸವ ಕವನದ ಸಾಲುಗಳು ಕನ್ನಡಿಗರಿಗೆ ನೆನಪಾಗುತ್ತವೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ರುದ್ರ ರಮಣೀಯವಾಗಿ ಹರಿಯುತ್ತಿದ್ದು ಜೋಗದ ಸೌಂದರ್ಯಕ್ಕೆ ಪ್ರವಾಸಿಗರು ಮನಸೋತಿದ್ದಾರೆ. ಹಾಲ್ನೊರೆಯಂತೆ ಮೇಲಿಂದ ಕೆಳಭಾಗಕ್ಕೆ ಧುಮ್ಮಿಕ್ಕುತ್ತಿರುವ ದೃಶ್ಯ ಮನಸ್ಸಿಗೆ ಮುದ...
ಶಿವಮೊಗ್ಗದಲ್ಲಿ ಎರಡನೇ ಝೀಕಾ ವೈರಸ್ ಪ್ರಕರಣ ಪತ್ತೆ ! ಓರ್ವ ಯುವಕನಲ್ಲಿ ಸೋಂಕು ದೃಢ !
ಶಿವಮೊಗ್ಗ : ರಾಜ್ಯದಲ್ಲಿ ಡೆಂಘೀ ಅಟ್ಟಹಾಸದ ನಡುವೆ ಇದೀಗ ಮಹಾಮಾರಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್ ಮೊದಲ ಬಲಿ ಪಡೆದಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಝೀಕಾ ಪ್ರಕರಣ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಯುವಕರೊಬ್ಬರಲ್ಲಿ ಝೀಕಾ ಸೋಂಕು ದೃಢಪಟ್ಟಿದೆ.ಟ್ರಾವೆಲ್ ಹಿಸ್ಟ್ರಿ ಇಲ್ಲದ ಯುವಕನಿಗೆ ಝೀಕಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ಸಾಗರ ತಾಲೂಕಿನ ಗಾಂಧಿನಗರದ ಯುವಕನಲ್ಲಿ ಝೀಕಾ ವೈರಸ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗದ ಗಾಂಧಿನಗರದಲ್ಲಿ ಝೀಕಾ ವೈರಸ್ ಗೆ 74 ವರ್ಷದ...
ರಾಜ್ಯದಲ್ಲಿ ಝಿಕಾ ವೈರಸ್ ಗೆ ಮೊದಲ ಬಲಿ ! ಶಿವಮೊಗ್ಗದಲ್ಲಿ 74 ವರ್ಷದ ವೃದ್ಧ ಸಾವು ! ಡೆಂಗ್ಯೂ ಭೀತಿ ಬೆನ್ನಲ್ಲೇ ಝಿಕಾ ಆತಂಕ !
ಶಿವಮೊಗ್ಗ : ರಾಜ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಈಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೆ, ಝೀಕಾ ವೈರಸ್ ಕೂಡ ರಾಜ್ಯಕ್ಕೆ ಒಕ್ಕರಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ ಗಾಂಧಿ ನಗರದ ನಿವಾಸಿಯ ವೃದ್ಧರು ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿತ್ತು.ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ ಕರೆದುಕೊಂಡು...
ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ! ಜಿಲ್ಲಾ ಪಂಚಾಯತ್ ಸಿಇಓ ವರ್ಗಾವಣೆ ! ಹೊಸ ಸಿಇಓ ಯಾರು ?
ಶಿವಮೊಗ್ಗ : ಆಡಳಿತ ವರ್ಗಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದೂ ಒಟ್ಟು 21 ಐಎಎಸ್ ಅಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಎಲ್ಲ ಅಧಿಕಾರಿಗಳು ತಕ್ಷಣವೇ ನೂತನ ಜಾಗಗಳಿಗೆ ರೀಪೋರ್ಟ್ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೆಶ್ ಕುಮಾರ್ ಎಸ್ ನಿರ್ದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ( ಸಿಇಓ ) ಕಾರ್ಯ ನಿರ್ವಹಿಸುತ್ತಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ ಅವರನ್ನು ವರ್ಗಾವಣೆ ಮಾಡಿ...
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಭೇಟಿ !
ಭದ್ರಾವತಿ : ಇಂದು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದು ಕಾರ್ಖಾನೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಚಿವ ಕುಮಾರಸ್ವಾಮಿ ಕಾರ್ಖಾನೆಯ ಆವರಣದ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಐಎಸ್‌ಎಲ್ ಕಾರ್ಖಾನೆಯ ಪುನಶ್ಚೇತನ, ಬಂಡವಾಳ, ವಿವಿಧ ವಿಭಾಗಗಳ ಪುನಾರಂಭ, ಉತ್ಪಾದನೆ, ಗಣಿ ಸೇರಿ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕುಮಾರಸ್ವಾಮಿ...
ಟಿ-20 ವಿಶ್ವ ಕಪ್ ಮುಡಿಗೇರಿಸಿಕೊಂಡ ಭಾರತ ! 17 ವರ್ಷಗಳ ನಂತ್ರ ಟಿ20 ವಿಶ್ವಕಪ್ ಗೆದ್ದ ರೋಹಿತ್ ಪಡೆ !
ಸ್ಪೋರ್ಟ್ಸ್ : ಚೋಕರ್ಸ್ vs ಚೋಕರ್ಸ್ (Chokers) ಅಂತಾಲೇ ಬಿಂಬಿಸಲಾಗಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ. 17 ವರ್ಷಗಳ ಬಳಿಕ ಟೀಂ ಇಂಡಿಯಾ ಐಸಿಸಿ ವಿಶ್ವಕಪ್‌ಗೆ ಮುತ್ತಿಟ್ಟಿದೆ. ಸೌತ್ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ ಟೀಂ ಇಂಡಿಯಾ ಮತ್ತೆ ಚಾಂಪಿಯನ್ ಆಗಿದೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಸೋತಿತ್ತು. ಆದ್ರೀಗ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಮತ್ತೆ ಚಾಂಪಿಯನ್ ಆಗಿದೆ. ಇಂದಿನ ರಣರೋಚಕ ಪಂದ್ಯದಲ್ಲಿ ಟೀಂ ಇಂಡಿಯಾ...
ಹಾವೇರಿ ದುರ್ಘಟನೆ : ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿ ಎಂ ಸಿದ್ದರಾಮಯ್ಯ !
ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು. ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ...
ಹಾವೇರಿ ಘಟನೆ : ಎಮ್ಮೆಹಟ್ಟಿ ಗ್ರಾಮದಲ್ಲಿ 9 ಜನರ ಸಾಮೂಹಿಕ ಅಂತ್ಯಸಂಸ್ಕಾರ !
ಭದ್ರಾವತಿ : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಜನರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದಲ್ಲಿ ನೆರವೇರಿಸಲಾಯಿತು. ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಅದರಲ್ಲಿ 9 ಮಂದಿಯನ್ನು ಸಾಮೂಹಿಕ ಅಂತ್ಯಸಂಸ್ಕಾರ ಮಾಡಲಾಯಿತು. ಆದರ್ಶ್, ವಿಶಾಲಾಕ್ಷಿ, ನಾಗೇಶ್ ರಾವ್, ಸುಭದ್ರಾ ಬಾಯಿ, ಮಾನಸಾ, ರೂಪಾ ಬಾಯಿ, ಭಾಗ್ಯಬಾಯಿ, ಅರುಣ್ ಕುಮಾರ್, ಮಂಜುಳಾ ಒಟ್ಟು 9 ಮಂದಿಗೆ ಸಾಮೂಹಿಕವಾಗಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. 4 ಅಂಬುಲೆನ್ಸ್...
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ! ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ! ಶಿವಮೊಗ್ಗ ಮೂಲದ 13 ಮಂದಿ ಧಾರುಣ ಸಾವು !
ಹಾವೇರಿ : ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಮೃತರ ಹಿನ್ನಲೆ ಪತ್ತೆ ಹಚ್ಚುತ್ತಿರುವ ಪೋಲೀಸರು. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ...