ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಉದ್ಯೋಗ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (Karnataka State Fire and Emergency Services – KSFES) ಇಲಾಖೆಯು 975 ಫೈರ್‌ಮ್ಯಾನ್, ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಅಗ್ನಿಶಾಮಕ ಇಂಜಿನ್ ಡ್ರೈವರ್ ಹುದ್ದೆಗಳಿಗೆ KSFES ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಕಿರು ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್ ksfes.karnataka.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ KSFES ನೇಮಕಾತಿ 2024 ಗಾಗಿ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಪರಿಶೀಲಿಸಬಹುದು: ಖಾಲಿ ಹುದ್ದೆ, ದಿನಾಂಕಗಳು, ಹೇಗೆ ಅನ್ವಯಿಸಬೇಕು, ಅರ್ಹತಾ ಮಾನದಂಡಗಳು ಮತ್ತು ಇತರ ಉಪಯುಕ್ತ ಮಾಹಿತಿ ಇಲ್ಲಿ ನೀಡಸಲಾಗಿದೆ. KSFES ನೇಮಕಾತಿ 2024 ವಿವರವಾದ ಅಧಿಸೂಚನೆಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕರ್ನಾಟಕ ಅಗ್ನಿಶಾಮಕ ಸಿಬ್ಬಂದಿ ನೇಮಕಾತಿ ಅಧಿಕೃತ ಅಧಿಸೂಚನೆ ಮತ್ತು ಫೈರ್ ಇಂಜಿನ್ ಚಾಲಕ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಅಭ್ಯರ್ಥಿಗಳು ಕಾಯಬೇಕಾಗುತ್ತದೆ. ಇಲ್ಲಿ ನೀವು ಅರ್ಹತೆ, ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ನಮೂನೆ ಸೇರಿದಂತೆ...

ಅಡಿಕೆ ತೋಟದಲ್ಲಿ ಗಾಂಜಾ ಘಾಟು ! ಪೊಲೀಸರ ಭರ್ಜರಿ ಕಾರ್ಯಾಚರಣೆ !

ಅಡಿಕೆ ತೋಟದಲ್ಲಿ ಗಾಂಜಾ ಘಾಟು ! ಪೊಲೀಸರ ಭರ್ಜರಿ ಕಾರ್ಯಾಚರಣೆ !

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ ಶಿವಮೊಗ್ಗ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ, ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷ ಗಜಾನನ ವಾಮನ ಸುತರ, ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡ ಸ್ಥಳಕ್ಕೆ ದಾಳಿ ನಡೆಸಿತ್ತು. ಸ್ಥಳಕ್ಕೆ ಹೋಗಿ ದಾಳಿ ನಡೆಸಿದ ತಂಡ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು 2.50 ಲಕ್ಷ ಮೌಲ್ಯದ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ಅಮಾನತು ಪಡಿಸಿಕೊಂಡು ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ವರದಿ : ಲಿಂಗರಾಜ್ ಗಾಡಿಕೊಪ್ಪ 

ಗೋ ಹತ್ಯೆ, ಅಕ್ರಮ ಗೋಸಾಗಾಟ ವಿರುದ್ಧ ಕಠಿಣ  ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ, ಬಜರಂಗದಳ ಎಸ್ ಪಿ ಗೆ ಮನವಿ

ಗೋ ಹತ್ಯೆ, ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ, ಬಜರಂಗದಳ ಎಸ್ ಪಿ ಗೆ ಮನವಿ

ಶಿವಮೊಗ್ಗ : ಬಕ್ರೀದ್ ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಬಜರಂಗದಳ ಮತ್ತು ವಿಹೆಚ್ ಪಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಅವರಿಗೆ ಮನವಿ ಸಲ್ಲಿಸಿದೆ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ( ಯಾವುದೇ ರೀತಿಯ ಹತ್ಯೆ ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ ಕೊಟ್ಟ ಸ್ಥಳವನ್ನು ಸರಕಾರ ಮುಟ್ಟುಗೋಲಿಗೆ ಅವಕಾಶವಿದೆ. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯಿದೆ 1959 ತಿದ್ದುಪಡಿ 1975 ಇದರ ಪ್ರಕಾರವೂ ಜಾನುವಾರು ಬಲಿ (ಕುರ್ಬಾನಿ) ನಿಷೇಧವಿದೆ. ಜಾನುವಾರುಗಳ ಕುರ್ಬಾನಿ ಕಟ್ಟು ನಿಟ್ನಾಗಿ ತಡೆಯಲು ನಾವು ಮನವಿ ಮಾಡುತ್ತಿದ್ದೇವೆ. ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ಬಕ್ರೀದ್ ವರೆಗೂ ನಾಕಾಬಂದಿ ಹಾಕುವಂತೆ. ಬಕ್ರೀದ್ ವರೆಗೆ ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ...

BIG BREAKING NEWS : ಕೊಲೆ ಪ್ರಕರಣದಲ್ಲಿ  ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೇಸ್ಟ್ !

BIG BREAKING NEWS : ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೇಸ್ಟ್ !

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಇಂದು ಬೆಳಗಿನ ಜಾವ ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ  ಇದನ್ನೂ ಓದಿ  : ಶಿವಮೊಗ್ಗ : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ !

ಶಿವಮೊಗ್ಗ  : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ  ಅರ್ಜಿ ಆಹ್ವಾನ !

ಶಿವಮೊಗ್ಗ : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ !

ಶಿವಮೊಗ್ಗ : ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಪ್ರವೇಶ ಸೀಟುಗಳನ್ನು ಭರ್ತಿ ಮಾಡಲು ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಆಧಾರಿತವಾಗಿ ಆಫ್‍ಲೈನ್ ಮೂಲಕ ಜೂ.10 ರಿಂದ 25 ರವರೆಗೆ ಅರ್ಜಿ ಸ್ವೀಕರಿಸಲಾಗುವುದು. ಜೂ. 27ರಿಂದ 28ರವರೆಗೆ ಸೀಟು ಹಂಚಿಕೆ ಮಾಡಲಾಗುವುದು. ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ), ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲೀಷ್), ಆಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳು ಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ಐಟಿಐ/ಪಿಯುಸಿ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಮೂಲ ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, 5 ವರ್ಷದ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆಧಾರ್,...

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ !

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ !

ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಇಬ್ಬರಿಗೆ ಚೂರಿ ಇರಿಯಲಾಗಿದೆ, ಈ ಹಿಂದೆಯೂ ಆ ಭಾಗದಲ್ಲಿ ಇಂತಹ ಘಟನೆಗಳು ನಡೆದಿದ್ದವು, ಚುನಾವಣೋತ್ತರದಲ್ಲಿ ಈ ರೀತಿ ಬಿಜೆಪಿ ಕಾರ್ಯರ್ತರನ್ನು ಗುರಿಯಾಗಿಸಿಟ್ಟುಕೊಂಡು ರಾಜಕೀಯ ಪ್ರೇರಿತ ಹಲ್ಲೆಗಳು ನಡೆಯುತ್ತಿರುವುದು ಖಂಡನೀಯ. ಕಾಂಗ್ರೆಸ್ ಆಡಳಿತ ಆಡಳಿತದಲ್ಲಿರುವಾಗ ಇಂತಹ ಘಟನೆಗಳು ನಡೆಯುತ್ತಿರುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ,  ರಾಜಕೀಯ ದ್ವೇಷದ ಹಲ್ಲೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಯ ಅಶಾಂತಿಗೆ ಕಾರಣವಾಗಲಿದೆ, ಈ ಘಟನೆ ಕುರಿತು ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕು ಎಂದು ಮಂಗಳೂರು ಮಾನ್ಯ ಶಾಸಕರಾದ...

ಸಾಗರ ರಸ್ತೆಯಲ್ಲಿ ಮತ್ತೊಂದು ಬಸ್ ಅಪಘಾತ ! ಕಾರು ಬಸ್ ಮುಖಾಮುಖಿ ಡಿಕ್ಕಿ !

ಸಾಗರ ರಸ್ತೆಯಲ್ಲಿ ಮತ್ತೊಂದು ಬಸ್ ಅಪಘಾತ ! ಕಾರು ಬಸ್ ಮುಖಾಮುಖಿ ಡಿಕ್ಕಿ !

ಸಾಗರ : ಆನಂದಪುರದ ಸಮೀಪದ ಉಳ್ಳೂರಿನ ಹಕ್ರೆ ಕೊಪ್ಪ ರಸ್ತೆಯ ತಿರುವಿನ ಬಳಿ ಗುರುರಾಜ ಎಂಬ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಗುರುರಾಜ ಎಂಬ ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹಾಗೂ ಶಿವಮೊಗ್ಗದಿಂದ ಸಾಗರಕ್ಕೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಇದರಿಂದ ಕಾರಿನಲ್ಲಿದ್ದ ಚಾಲಕನಿಗೆ ತೀವ್ರವಾದ ಪೆಟ್ಟಾಗಿದ್ದು. ತಕ್ಷಣ ಇವರನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಬಸ್ಸಿ ನಲ್ಲಿದ್ದ 20ಕ್ಕೆ ಹೆಚ್ಚು ಪ್ರಯಾಣಿಕರಿಗೆ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ. ಸ್ಥಳಕ್ಕೆ ಸಾಗರದ ಪೊಲೀಸ್ ಸಿಬ್ಬಂದಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ವರದಿ : ಅಮಿತ್ ಆನಂದಪುರ  ಇದನ್ನೂ  ಓದಿ  : ಹೊಸಮನೆ ವಾಹನಗಳ ದ್ವಂಸ ಪ್ರಕರಣ : ಕಪಾಲಿ, ಬಿಕ್ಲಾ ಅಂಡ್ ಗ್ಯಾಂಗ್ ಅರೆಸ್ಟ್ !

ದೊಡ್ಮನೆ ಕುಟುಂಬದಲ್ಲಿ ಮೊದಲ ಡಿವೋರ್ಸ್  : ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಯುವರಾಜ್ ಕುಮಾರ್ !

ದೊಡ್ಮನೆ ಕುಟುಂಬದಲ್ಲಿ ಮೊದಲ ಡಿವೋರ್ಸ್ : ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಯುವರಾಜ್ ಕುಮಾರ್ !

ಬೆಂಗಳೂರು : ಸ್ಯಾಂಡಲ್‌ವುಡ್ ಕ್ಯೂಟ್ ಕಪಲ್ ಎಂದು ಹೆಸರುವಾಸಿಯಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತ ವಿಚ್ಛೇಧನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚ್ಛೇಧನ ಪ್ರಕರಣ ಬೆಳಕಿಗೆ ಬಂದಿದೆ. ಸ್ಯಾಂಡಲ್‌ವುಡ್ ನ ದೊಡ್ಡನೆ ಎಂದು ಕೆರಸಿಕೊಳ್ಳುವ ಡಾ.ರಾಜ್ ಕುಮಾರ್‌ರ ಕುಟುಂಬದಲ್ಲಿ ಈಗ ಮೊದಲ ಡಿವೋರ್ಸ್ ಕೇಸ್ ದಾಖಲಾಗಿದೆ. ಸ್ಯಾಂಡಲ್‌ವುಡ್ ನ ದೊಡ್ಡ್ಮನೆ ಎಂದು ಕೆರಸಿಕೊಳ್ಳುವ ಡಾ.ರಾಜ್ ಕುಮಾರ್‌ರ ಕುಟುಂಬದಲ್ಲಿ ಈಗ ಮೊದಲ ಡಿವೋರ್ಸ್ ಕೇಸ್ ದಾಖಲಾಗಿದೆ.ಯುವ ಸಿನಿಮಾದ ಮೂಲಕ ಸ್ಯಾಂಟಲ್‌ವುಡ್ ಗೆ ಭರ್ಜರಿ ಎಂಟ್ರಿ ಕೊಟ್ಟು ಮೊದಲ ಸಿನಿಮಾದಲ್ಲೇ ಯಶಸ್ಸು ಕಂಡಿರುವ ಯುವ ರಾಜ್‌ಕುಮಾರ್ ವೈಯಕ್ತಿಕ ಬಾಳಲ್ಲಿ ಬಿರುಗಾಳಿ ಎದ್ದಿದೆ. ಕಳೆದ 6ನೇ ತಾರೀಕು ಫ್ಯಾಮಿಲಿ ಕೋರ್ಟ್‌ನಲ್ಲಿ ಯುವ ರಾಜ್‌ಕುಮಾರ್ ಅರ್ಜಿ ಸಲ್ಲಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಎಂಸಿ ಆಯಕ್ಟ್ ಸೆಕ್ಷನ್ 13(1)(ia) ಅಡಿಯಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಯುವ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್‌ನಿಂದ ಈಗಾಗಲೇ ನೋಟಿಸ್ ಕೂಡ ಜಾರಿಯಾಗಿದೆ. ಯುವ ತಮ್ಮ ಪತ್ನಿಯ ವಿರುದ್ಧ ಕ್ರೌರ್ಯ, ಅಗೌರವದಿಂದ ನೋಡಿಕೊಂಡ ಆರೋಪ ಮಾಡಿ...

ಹೊಸಮನೆ ವಾಹನಗಳ ದ್ವಂಸ ಪ್ರಕರಣ : ಕಪಾಲಿ, ಬಿಕ್ಲಾ ಅಂಡ್ ಗ್ಯಾಂಗ್ ಅರೆಸ್ಟ್ !

ಹೊಸಮನೆ ವಾಹನಗಳ ದ್ವಂಸ ಪ್ರಕರಣ : ಕಪಾಲಿ, ಬಿಕ್ಲಾ ಅಂಡ್ ಗ್ಯಾಂಗ್ ಅರೆಸ್ಟ್ !

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಮೂರನೇ ತಿರುವಿನಲ್ಲಿ ಮೇ 30ರ ರಾತ್ರಿ ನಡೆದ ಬರ್ತಡೇ ಪಾರ್ಟಿಯ ನಶೆಯಲ್ಲಿದ್ದ ಗ್ಯಾಂಗ್ ಒಂದು ಮನೆಗಳ ಮುಂದೆ ನಿಲ್ಲಿಸಿದ್ದ ಸ್ಥಳೀಯರ ಕಾರ್ ಬೈಕ್ ಆಟೋಗಳನ್ನು ಲಾಂಗು ಮಚ್ಚುಗಳಿಂದ ಹೊಡೆದು ಜಖಂಗೊಳಿಸಿ ತಲೆಮರಿಸಿಕೊಂಡಿದ್ದರು, ವಾಹನಗಳನ್ನು ದ್ವಂಸಗೊಳಿಸಿದ್ದ ದುಷ್ಕರ್ಮಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ  ದಿನಾಂಕ: 30-05-2024 ರಂದು ರಾತ್ರಿ ದುಷ್ಕರ್ಮಿಗಳು ಶಿವಮೊಗ್ಗ ನಗರದ ಹೊಸಮನೆ 3ನೇ ಕ್ರಾಸ್‌ನಲ್ಲಿ, ಸಾರ್ವಜನಿಕರು ಮನೆಯ ಮುಂಭಾಗ ನಿಲ್ಲಿಸಿದ್ದ ವಾಹನಗಳ ಗ್ಯಾಸ್ ಗಳನ್ನು ಒಡೆದು ಜಖಂ ಗೊಳಿಸಿರುತ್ತಾರೆಂದು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ PREVENTION OF DESTRUCTION AND LOSS OF PROPERTY ACT, ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿರುತ್ತಾರೆ. ಆರೋಪಿತರ ಪತ್ತೆಗಾಗಿ ಶಿವಮೊಗ್ಗ ಜಿಲ್ಲಾ ರಕ್ಷಣಾ ಅಧಿಕಾರಿ ಮಿಥುನ್ ಕುಮಾರ್ ಜಿ.ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ -1ಅನಿಲ್ ಕುಮಾರ್ ಭೂಮಾರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು- 2 ಕಾರಿಯಪ್ಪ ಎ.ಜಿ, ಇವರ ಮಾರ್ಗದರ್ಶನದಲ್ಲಿ ಬಾಬು...

ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ

ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಜವಾಹರಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಪೇಜಾವರ ಶ್ರಿಗಳು, ಚಿನ್ನಜೀಯರ್ ಸ್ವಾಮಿಜಿ ಸೇರಿದಂತೆ ವಿವಿಧ ಸಾಧು ಸಂತರು, ಮಠಾಧೀಶರು ಕೂಡ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಉಪ ರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ನೇಪಾಳಿ ಪ್ರಧಾನಿ ಪುಷ್ಪ ಕಮಲ್ ದಹಲ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್...