ಶಿವಮೊಗ್ಗ : ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯ ಆಗಿದ್ದು, ಫಲಿತಾಂಶಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಕುತೂಹಲ ಹೆಚ್ಚಿಸಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಚುನಾವಣೆಯಲ್ಲಿ ಗೆಲುವು ಯಾರಿಗೆ? ಎಂಬ ಲೆಕ್ಕಾಚಾರ ಜೋರಾಗಿದೆ. ಅದರಲ್ಲೂಈ ಕ್ಷೇತ್ರದ ಫಲಿತಾಂಶದಲ್ಲಿ ಉತ್ತಮ ಪೈಪೋಟಿ ನಿರೀಕ್ಷೆಯಿದೆ. ಇದರಿಂದ ಹಲವೆಡೆ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಪೂಜೆ ಹೋಮ, ಹವನಗಳನ್ನು ನಡೆಸುತ್ತಿದ್ದಾರೆ. ಇಂದು ಈ ಬಾರಿ ಚುನಾವಣೆಯಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ ಎಂದು ಕೆಲವೇ ಗಂಟೆಗಳಲ್ಲಿತಿಳಿಯಲಿದ್ದು, ಕುತೂಹಲ ಹೆಚ್ಚಾಗುತ್ತಲೇ ಇದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಒಂದು ತಿಂಗಳಿಗೂ ಹೆಚ್ಚು ಕಾದ ಚುನಾವಣೆ ಫಲಿತಾಂಶದ ಕಾಯುವಿಕೆಗೆ ಬ್ರೇಕ್ ಬೀಳಲಿದೆ. ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದ್ದು, ಶಿವಮೊಗ್ಗ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...
ಶಿವಮೊಗ್ಗದಲ್ಲಿ ಒಂದು ಮಟನ್ ಪೀಸ್‌ಗಾಗಿ ಗ್ರಾಹಕನ ಬುರುಡೆ ಬಿಚ್ಚಿದ ಅಪ್ರಾಪ್ತ ಯುವಕ !
ಶಿವಮೊಗ್ಗ : ಬೆಳಗ್ಗೆ ಮಟನ್ ಶಾಪ್‌ಗೆ ಹೋಗಿದ್ದ ಗ್ರಾಹಕ ತಾನು ಖರೀದಿ ಮಾಡಿದ ಮಟನ್‌ನಿಂದ ಒಂದೆರಡು ಪೀಸ್ ಹೆಚ್ಚಾಗಿ ಹಾಕುವಂತೆ ಗಲಾಟೆ ಮಾಡಿದ್ದಾನೆ. ಆದರೆ, ಗ್ರಾಹಕನ ಗಲಾಟೆಯಿಂದ ರೋಸಿ ಹೋಗಿದ್ದ ಅಂಗಡಿಯಲ್ಲಿ ಕೆಲಸ ಮಾಡುವ ಅಪ್ರಾಪ್ತ ಬಾಲಕ ಗ್ರಾಹಕನ ತಲೆಗೆ ಮಟನ್ ಕತ್ತರಿಸುವ ಖತ್ತಿಯಿಂದ ಹಲ್ಲೆ ಮಾಡಿದ್ದಾನೆ ಹೌದು, ಆಪ್ರಾಪ್ತ ಬಾಲಕನಿಂದ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಶಿವಮೊಗ್ಗದ ಟಿಪ್ಪು ನಗರದ ಮಟನ್ ಸ್ಟಾಲ್ ಒಂದರ ಬಳಿ ಘಟನೆ ನಡೆದಿದೆ. ಮಟನ್ ಅಂಗಡಿಯ ಬಳಿ ಕುಡಿದು ಗಲಾಟೆ ಮಾಡಿದ ಹಿನ್ನೆಲೆ ನಡೆದ ಹಲ್ಲೆ ಮಾಡಿದ್ದಾನೆಂದು ಹೇಳಲಾಗುತ್ತಿದೆ. ಮಲ್ಲೇಶ್ (45) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಮಲ್ಲೇಶ್ ಮಟನ್ ಅಂಗಡಿಗೆ ಹೋಗಿದ್ದನು. ಅಂಗಡಿಯಲ್ಲಿದ್ದ 16 ವರ್ಷದ ಅಪ್ರಾಪ್ತ ಬಾಲಕನಿಗೆ ಮಟನ್ ಪಡೆದ ಮೇಲೆ ಇನ್ನೂ ಹೆಚ್ಚು ಹಾಕುವಂತೆ ಗಲಾಟೆ ಮಾಡಿದ್ದನು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಕಾರು !
ಶಿವಮೊಗ್ಗ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ನಡೆದಿದೆ. ಹನಸವಾಡಿ ಗ್ರಾಮದ ಮಂಜಮ್ಮ (45) ಎಂಬುವವರು ಮೃತಪಟ್ಟಿದ್ದಾರೆ. ಮಹಿಳೆಗೆ ಗುದ್ದಿದ ಕಾರು ನೇರವಾಗಿ ಹೋಟೆಲ್‌ಗೆ ನುಗ್ಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದಾಗ ಎದುರಿಗೆ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ನಜ್ಜುಗಜ್ಜಾಗಿದ್ದ ಕಾರನ್ನು ತೆರವು ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ಈ ಜಿಲ್ಲೆಯ ಪದವೀಧರ ಹಾಗೂ ಶಿಕ್ಷಕರಿಗೆ ಸಾಂದರ್ಭಿಕ ರಜೆ ಘೋಷಣೆ.!
ಶಿವಮೊಗ್ಗ : ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ನಾಳೆ ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು...
ವಿದ್ಯಾನಗರದ ಬಳಿ ರೈಲು ಹರಿದು ಕಾರ್ಮಿಕ ಸಾವು !
ಶಿವಮೊಗ್ಗ : ರೈಲು ಹರಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ವಿದ್ಯಾನಗರದ ಬಳಿಯಿರುವ ರೈಲ್ವೆ ಹಳಿ ಪಕ್ಕದಲ್ಲಿ ಸೌದೆ ಆರಿಸುತ್ತಿದ್ದ ಕಾರ್ಮಿಕನೋರ್ವ ರೈಲು ಹರಿದು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ರುದ್ರಪ್ಪ (68) ಮೃತ ದುರ್ದೈವಿ. ಇತ ರೈಲ್ವೆ ಹಳಿ ಬಳಿ ಸೌದೆ ಆರಿಸುತ್ತಿದ್ದ ವೇಳೆ ಮೈಸೂರು ತಾಳಗುಪ್ಪ ರೈಲಿಗೆ ಸಿಲುಕಿ ಈ ಅವಘಡ ನಡೆದಿದೆ. ಇನ್ನು ರುದ್ರಪ್ಪ, ಸ್ವಲ್ಪ ಕಿವುಡು ಹಾಗೂ ಕಣ್ಣು ಮಂಜಿನಿಂದ ಬಳಲುತ್ತಿದ್ದನಂತೆ. ಹೀಗಾಗಿ ರೈಲು ಬಂದ ಶಬ್ದ ಕೇಳಿಸದೇ ದುರ್ಘಟನೆ ಸಂಭವಿಸಿದ್ದು, ಈ ಕುರಿತು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ !
ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 Just 10ನೇ ತರಗತಿ) ಗಳಿಗೆ ವಾರ್ಷಿಕ ರೂ.10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಆದ್ದರಿಂದ ಆಯಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು 2023-24ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ...
ಪುರದಾಳು ಬಳಿಯ ಚಿತ್ರ ಶೆಟ್ಟಿಹಳ್ಳಿಯಲ್ಲಿ ಕಾಡಾನೆ ಪ್ರತ್ಯಕ್ಷ ! ಮಲೆನಾಡ ಭಾಗದಲ್ಲಿ ಮುಂದುವೆರೆದ ಕಾಡಾನೆಗಳ ಪ್ರತ್ಯಕ್ಷ !
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪುರದಾಳು ಗ್ರಾಮದ ಚಿತ್ರ ಶೆಟ್ಟಿ ಹಳ್ಳಿಯ ಬಳಿ ಕಾಡಾನೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ ಇತ್ತೀಚಿಗೆ ಮಲೆನಾಡು ಭಾಗಗಳಲ್ಲಿ ಪದೇ ಪದೇ ಆನೆಗಳು ಪ್ರತ್ಯಕ್ಷವಾಗುತ್ತಿರುವುದು ಮುಂದುವರೆದಿದೆ. ಇತ್ತೀಚಿಗಷ್ಟೇ ಶಿವಮೊಗ್ಗ ಗ್ರಾಮಾಂತರದ ಭಾಗದ ಚೋರಡಿ ಬಳಿ ಕಾಡಾನೆ ಬೆಳೆಗಳನ್ನು ನಾಶ ಮಾಡಿರುವ ಘಟನೆ ನಡೆದಿತ್ತು, ನಂತರ ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಆನೆ ಕಾಣಿಸಿಕೊಂಡಿತ್ತು, ಬಸವಪುರದಲ್ಲೂ ಕೂಡ ಆನೆ ಪ್ರತ್ಯಕ್ಷ ವಾಗಿರುವ ದೃಶ್ಯಗಳು ಲಭ್ಯವಾಗಿದ್ದವು ಈಗ ಚಿತ್ರ ಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ.ವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಚಿತ್ರ ಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿದ್ದು ಮಲೆನಾಡು ಭಾಗದಲ್ಲಿ ಪದೇ ಪದೇ ಆನೆಗಳು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕ ಹುಟ್ಟಿಸಿದೆ. ಕಳೆದ ಕೆಲವು ದಿನಗಳಿಂದ ಶೆಟ್ಟಿಹಳ್ಳಿ , ಪುರದಾಳು ಭಾಗದಲ್ಲಿ ಆನೆ...
ನಾಳೆ ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಇಂದಿನಿಂದಲೇ ಮಸ್ಟರಿಂಗ್ ಕಾರ್ಯ ಆರಂಭ !
ಶಿವಮೊಗ್ಗ : ಲೋಕಸಭಾ ಚುನಾವಣೆ ಬೆನ್ನಲ್ಲೇ ಈಗ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಾಳೆ ಜೂನ್ 3ರಂದು ನಡೆಯಲಿದೆ ಜೂನ್ 3ರ ಸೋಮವಾರ ಬೆಳಗ್ಗೆ 8ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 38 ಮತ ಕೇಂದ್ರಗಳನ್ನ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 27,412 ಮತದಾರರು ಇದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇನ್ನು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿ 4365 ಮತದಾರರು ಇದ್ದು. 32 ಮತ ಕೇಂದ್ರಗಳನ್ನ ತೆರೆಯಲಾಗಿದೆ. ಮತದಾರರು ತಮ್ಮ ಮತ ಇರುವ ಕೇಂದ್ರಗಳಲ್ಲಿ ಮತದಾನ ಮಾಡಬಹುದು. ಇನ್ನು ಮತದಾನ ಮಾಡಲು ಚುನಾವಣಾ ಆಯೋಗ ಸೂಚಿಸಿರುವ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮತದಾನ ಮಾಡಬಹುದು ಜೂನ್ ಮೂರರ ಸೋಮವಾರ ಬೆಳಗ್ಗೆ...
ಸೀಟಿಗಾಗಿ ಮಹಿಳೆಯರಿಬ್ಬರ ಗಲಾಟೆ ! ಗಲಾಟೆ ನಿಯಂತ್ರಿಸಲಾಗದೆ ಠಾಣೆಗೆ ತಂದು ಬಸ್ಸು ನಿಲ್ಲಿಸಿದ ಚಾಲಕ !
ಶಿವಮೊಗ್ಗ : ಸೀಟಿಗಾಗಿ ಮಹಿಳೆಯರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ಸಾಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭವಾದಾಗಿನಿಂದ ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್ಸನ್ನು ಅವಲಂಭಿಸುತ್ತಿದ್ದಾರೆ ಈ ನಡುವೆ ಸೀಟಿಗಾಗಿ ಬಸ್ಸಿನಲ್ಲಿ ಮಹಿಳೆಯರು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ನಡೆದಿದ್ದೇನು ? ಶುಕ್ರವಾರ ರಾತ್ರಿ ಸಾಗರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್ಸಿನಲ್ಲಿ ಇಬ್ಬರು ಮಹಿಳೆಯರು ಸೀಟಿಗಾಗಿ ಜಗಳ ಮಾಡಿಕೊಂಡಿದ್ದಾರೆ, ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿದೆ ಈ ನಡುವೆ ಬಸ್ಸಿನ ಚಾಲಕ, ನಿರ್ವಾಹಕ ಸೇರಿದಂತೆ ಬಸ್ಸಿನಲ್ಲಿದ್ದ...
ಮತ ಏಣಿಕೆಗೆ ಸಕಲ ಸಿದ್ಧತೆ – ಜಿಲ್ಲಾಧಿಕಾರಿ ಗುರುದತ್ ಹೆಗಡೆ
ಶಿವಮೊಗ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4ರಂದು ನಡೆಯಲಿದೆ. ಆಯೋಗದ ನಿಯಮಾನುಸಾರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಅಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಿಗ್ಗೆ 8ಕ್ಕೆ ಆರಂಭಿಸಲಾಗುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 17,52,885 ಮತದಾರರು ಇದ್ದು ಒಟ್ಟು 13,72,949 ಮತಗಳು ಚಲಾವಣೆಯಾಗಿವೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರಿಗೆ ಜೂನ್ 4ರಂದು ಬೆಳಿಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಬರಲು ತಿಳಿಸಲಾಗಿದೆ. ಬೆಳಿಗ್ಗೆ 7ಕ್ಕೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲು ಕ್ರಮ ವಹಿಸುವ ಮಾಹಿತಿ...







