ಯಾವ ಉಚ್ಚಾಟನೆಗೂ ನಾನು ಹೆದರಲ್ಲ ! ಉಚ್ಚಾಟನೆ ಬಳಿಕ ಕೆ ಎಸ್ ಈಶ್ವರಪ್ಪ  ಮೊದಲ ಪ್ರತಿಕ್ರಿಯೆ !

ಯಾವ ಉಚ್ಚಾಟನೆಗೂ ನಾನು ಹೆದರಲ್ಲ ! ಉಚ್ಚಾಟನೆ ಬಳಿಕ ಕೆ ಎಸ್ ಈಶ್ವರಪ್ಪ ಮೊದಲ ಪ್ರತಿಕ್ರಿಯೆ !

ಶಿವಮೊಗ್ಗ : ನಾನು ಯಾವ ಉಚ್ಚಾಟನೆಗೆ ಹೆದರುವುದಿಲ್ಲ. ನಾನು ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ. ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಉಚ್ಛಾಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಉಚ್ಛಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್‌ವೈ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಅಂದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು, 19ನೇ ತಾರೀಖು ಶಾಕಿಂಗ್ ಎಂದು ಹೇಳಿದ್ದರು. ನನ್ನ ಸ್ಪರ್ಧೆ ಯನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದರು ಎಂದು ಕೆ ಎಸ್ ಈಶ್ವರಪ್ಪ ಬಿ ಎಸ್ ವೈ ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

BREAKING NEWS ! ಕೆ ಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ ! ರಾಜ್ಯ ಬಿಜೆಪಿ ಅಧಿಕೃತ ಘೋಷಣೆ ! ಎಷ್ಟು ವರ್ಷ ಉಚ್ಚಾಟನೆ ಮಾಡಲಾಗಿದೆ  ?

BREAKING NEWS ! ಕೆ ಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ ! ರಾಜ್ಯ ಬಿಜೆಪಿ ಅಧಿಕೃತ ಘೋಷಣೆ ! ಎಷ್ಟು ವರ್ಷ ಉಚ್ಚಾಟನೆ ಮಾಡಲಾಗಿದೆ ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ. ಶಿವಮೊಗ್ಗದ ಅಧಿಕೃತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ಪಕ್ಷೇತರವಾಗಿ ಸ್ಪರ್ಧಿಸಿವ ನಿರ್ಧಾರ ಮಾಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪರವರನ್ನು ಭಾರತೀಯ ಜನತಾ ಪಾರ್ಟಿಯಿಂದ ಉಚ್ಚಾಟನೆ ಮಾಡಲಾಗಿದೆ.  ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜು ಪಾಟೀಲ್ ಪಕ್ಷದಿಂದ ಉಚ್ಚಾಟನೆಯ ಆದೇಶವನ್ನು ಹೊರಡಿಸಿದ್ದಾರೆ ಆದೇಶದಲ್ಲಿ ಏನಿದೆ ? ಎಷ್ಟು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ? ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು...

ಕೆ ಎಸ್ ಈಶ್ವರಪ್ಪನವರ ಚಿಹ್ನೆ  ಪ್ರಕಟಿಸಿದ ಚುನಾವಣಾ ಆಯೋಗ !

ಕೆ ಎಸ್ ಈಶ್ವರಪ್ಪನವರ ಚಿಹ್ನೆ ಪ್ರಕಟಿಸಿದ ಚುನಾವಣಾ ಆಯೋಗ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಚಿಹ್ನೆ ಯನ್ನು ಇಂದು ಚುನಾವಣಾ ಆಯೋಗ ಪ್ರಕಟಿಸಿದೆ ಕೈ ಕಟ್ಟಿರುವ ರೈತ ಮತ್ತು ಹಿಂದೆ ಕಬ್ಬಿನಜಲ್ಲೆ ಇರುವ  ಚಿಹ್ನೆಯನ್ನು ಕೆ ಎಸ್ ಈಶ್ವರಪ್ಪನವರಿಗೆ ಚುನಾವಣಾ ಆಯೋಗ ಇಂದು ನೀಡಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಲ್ಲಿಯವರೆಗೂ ತಮ್ಮ ಚುನಾವಣಾ ಪ್ರಚಾರಗಳಲ್ಲಿ ಮೋದಿ ಫೋಟೋವನ್ನು ಬಳಸುತ್ತಿದ್ದರು. ಈ ವಿಚಾರವಾಗಿ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಇದೀಗ ಈಶ್ವರಪ್ಪನವರಿಗೆ ಚಿಹ್ನೆ ದೊರೆತಿದ್ದು ಇನ್ನು ಮುಂದೆ ತಮ್ಮ ಎಲ್ಲಾ ಚುನಾವಣಾ ಪ್ರಚಾರಗಳಲ್ಲಿ ಈಶ್ವರಪ್ಪ ಚುನಾವಣಾ ಆಯೋಗ ಕೊಟ್ಟಿರುವಂತಹ ಚಿಹ್ನೆ ಯನ್ನು ಬಳಸಲಿದ್ದಾರೆ ವರದಿ : ಲಿಂಗರಾಜ್ ಗಾಡಿಕೊಪ್ಪ 

ನೇಹಾ ಕೊಲೆ ಕೇಸ್ ಸಿ ಐ ಡಿ ತನಿಖೆಗೆ ! ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ  ಹೇಳಿಕೆ !

ನೇಹಾ ಕೊಲೆ ಕೇಸ್ ಸಿ ಐ ಡಿ ತನಿಖೆಗೆ ! ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ !

ಶಿವಮೊಗ್ಗ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ l ಪ್ರಕರಣದ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಆರೋಪಿ ಫಯಾಜ್‌ನನ್ನು ಎನ್‌ಕೌಂಟರ್‌ ಮಾಡಬೇಕು ಎಂಬುದಾಗಿ ನೇಹಾ ಹಿರೇಮಠ ಅವರ ತಂದೆ ನಿರಂಜನ್‌ ಹಿರೇಮಠ ಅವರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ತನಿಖೆಯಾಗಬೇಕು ಎಂಬುದಾಗಿ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಪ್ರಕರಣದ ಕುರಿತು ಕೂಲಂಕಷ ತನಿಖೆಯಾಗಲಿ ಎಂಬ ದೃಷ್ಟಿಯಿಂದ ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದ್ದೇವೆ” ಎಂಬುದಾಗಿ ಹೇಳಿದ್ದಾರೆ....

ನೇಹಾ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ

ನೇಹಾ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಇಂದು ಶಿವಮೊಗ್ಗದ ಕೋರ್ಟ್ ಸರ್ಕಲ್ ನ ಬಳಿ ಕೆ ಎಸ್ ಈಶ್ವರಪ್ಪನವರ ನೇತೃತ್ವದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು  ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನೇಹಾ ಹತ್ಯೆ ಖಂಡಿಸಿ ಜೈಲ್ ವೃತ್ತದಿಂದ ಬೃಹತ್ ಸಂಖ್ಯೆಯಲ್ಲಿ ಹೊರಟ ರಾಷ್ಟ್ರಭಕ್ತರ ಬಳಗದ ಮೆರವಣಿಗೆ ಕೋರ್ಟ್ ಸರ್ಕಲ್ ( ಮಹಾವೀರ ವೃತ್ತ) ತಲುಪಿತ್ತು. ಕೋರ್ಟ್ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈ ವೇಳೆ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನೇಹಾ...

BREAKING NEWS : ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ! ಆರ್ ಎಕ್ಸ್ ಸೂರಿ ಮರ್ಡರ್ !

BREAKING NEWS : ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ! ಆರ್ ಎಕ್ಸ್ ಸೂರಿ ಮರ್ಡರ್ !

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ವ್ಯಕ್ತಿಯನ್ನು ಕ್ರಿಕೆಟ್ ಬ್ಯಾಟ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಬಾಪೂಜಿ ನಗರದಲ್ಲಿ ನಡೆದಿದೆ ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನದ ಬಳಿ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು ಬಾಪೂಜಿನಗರದ ಗಂಗಮ್ಮ ದೇವಸ್ಥಾನದ ಬಳಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ ಅಲಿಯಾಸ್ ಆರ್ ಎಕ್ಸ್ ಸೂರಿ ಎಂಬಾತನನ್ನು ಏಕಾಏಕಿ ಕ್ರಿಕೆಟ್ ಬ್ಯಾಟ್ ನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ಮೂಲಗಳ ಪ್ರಕಾರ ಸುರೇಶ ಅಲಿಯಾಸ್ ಆರ್ ಎಕ್ಸ್ ಸೂರಿ ಎಂಬಾತ ಇತ್ತೀಚೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ತಿಳಿದುಬಂದಿದ್ದು ಕೊಲೆಗೆ ನಿರ್ದಿಷ್ಟ ಕಾರಣ ತಿಳಿದು...

ನೇಹಾ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ  ವಿಶ್ವ ಹಿಂದೂ ಪರಿಷತ್, ಬಜರಂಗದಳ  ಪ್ರತಿಭಟನೆ !

ನೇಹಾ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ !

ಶಿವಮೊಗ್ಗ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ , ಬಜರಂಗದಳ ಮತ್ತು ಮಾತೃಶಕ್ತಿ-ದುರ್ಗಾವಾಹಿನಿ ಕೋಟೆ ಪ್ರಖಂಡ ವತಿಯಿಂದ ಇಂದು ನಗರದ ಶಿವಪ್ಪ ನಾಯಕ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಸಂಘಟನೆಯ ಮುಖಂಡ ರಾಜೇಶ್ ಗೌಡ ಮಾತನಾಡಿ ಎಂಟು ತಿಂಗಳ ಹಿಂದೆ ಬಂದ ಕಾಂಗ್ರೆಸ್ ಸರ್ಕಾರ ಹಿಂದೂ ಯುವಕ ಯುವತಿ ಮಹಿಳೆಯರ ವಿರುದ್ಧ ಪಿತೂರಿ ನಡೆಸುತ್ತಲೇ ಬಂದ ಪರಿಣಾಮ ಇಂದು ನೇಹಾಳ ಹತ್ಯೆ ನಡೆದಿದೆ. ಹುಬ್ಬಳ್ಳಿಯಲ್ಲಿ ಫಯಾಜ್ ಎಂಬತಾ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರ ಪುತ್ರಿ ನೇಹಾಳನ್ನು ಕೊಲೆ ಮಾಡಿದ್ದಾನೆ. ನೇಹಾಳನ್ನ ಲವ್ ಜಿಹಾದಿಗೆ ಬಲಿ ಕೊಡಲು ಹಿಂದೆ ಬಿದ್ದಿದ್ದ ಈತ ನಾಲ್ವರ ಸಹಾಯದಿಂದ ಈ ಕೊಲೆ ಮಾಡಿದ್ದಾನೆ. 38 ವರ್ಷಗಳಿಂದ ಹಿಂದೂ ಸಂಘಟನೆ ಹಿಂದೂ ಹೆಣ್ಣು ಮಕ್ಕಳನ್ನ ಎಚ್ಚರಿಸುತ್ತಾ ಬಂದರೂ ನೇಹಾಳನ್ನ ರಕ್ಷಿಸಲು...

ಶಿವಮೊಗ್ಗದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು !

ಶಿವಮೊಗ್ಗದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು !

ಶಿವಮೊಗ್ಗ : ತಾಲೂಕಿನ ಹರಮಘಟ್ಟ ಬಳಿ ಸಂಜೆ ಸುರಿದ ವಿಪರೀತ ಗುಡುಗು ಸಿಡಿಲು ಸಹಿತ ಭಾರಿ ಮಳೆಗೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವಾಗಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತೋಟದಲ್ಲಿ ಇದ್ದ ವ್ಯಕ್ತಿಯೊಬ್ಬರಿಗೆ ಸಿಡಿಲು ಬಡಿದಿದೆ ಎಂದು ಹೇಳಲಾಗಿದ್ದು. ರಾಕೇಶ್ ಎಂಬ ವ್ಯಕ್ತಿ ಮೃತವಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದ ರಾಕೇಶ್ ( 28) ಮೃತ ದುರ್ದೈವಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ನಿನ್ನೆ ಅಷ್ಟೇ ಜಿಲ್ಲೆಯಲ್ಲಿ ಸುರಿದ ಮಳೆಗೆ ತೀರ್ಥಹಳ್ಳಿಯ ಕೋಣಂದೂರು ಬಳಿ ಮರ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ವ್ಯಕ್ತಿ ಒಬ್ಬ...

ಶಿವಮೊಗ್ಗ ನಗರದಾದ್ಯಂತ ಕೂಲ್ ಕೂಲ್ ವಾತಾವರಣ ! ನಗರದಲ್ಲಿ ಗುಡುಗು ಸಿಡಿಲು ಸಹಿತ ಮಳೆ !

ಶಿವಮೊಗ್ಗ ನಗರದಾದ್ಯಂತ ಕೂಲ್ ಕೂಲ್ ವಾತಾವರಣ ! ನಗರದಲ್ಲಿ ಗುಡುಗು ಸಿಡಿಲು ಸಹಿತ ಮಳೆ !

ಶಿವಮೊಗ್ಗ : ಬಿರು ಬಿಸಿಲಿಗೆ ಬೆಸತ್ತು ಸಾಕಪ್ಪಾ ಸಾಕು ಈ ಸೆಕೆ ಎನ್ನುತ್ತಿರುವ ಮಲೆನಾಡಿಗರಿಗೆ ಮಳೆರಾಯ ತಂಪೆರೆದಿದ್ದಾನೆ. ಶಿವಮೊಗ್ಗ ನಗರದಲ್ಲಿ ಸುಮಾರು ಅರ್ಧಗಂಟೆ ಮಳೆ ಸುರಿದಿದ್ದು, ಸಂಜೆ ವೇಳೆ ಸುರಿದ ಮಳೆಗೆ ನಗರದಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯ ಹಲವು ಕಡೆಗಳಲ್ಲಿ ವರ್ಷಧಾರೆಯಾಗಿದ್ದು ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ 38 ರಿಂದ 40 ಡಿಗ್ರಿ ತಾಪಮಾನ ತಲುಪಿತು. ಬಿಸಿಲಿಗೆ ಜನರು ಹೈರಾಣಾಗಿದ್ದರು. ಇದೀಗ ಶಿಕಾರಿಪುರ ತೀರ್ಥಹಳ್ಳಿ ಹೊಸನಗರ ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯಾಗಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇನ್ನು ಜಿಲ್ಲೆಯಲ್ಲಿ ಪ್ರಾರಂಭವಾದ ಮಳೆಗೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಬಳಿ ಮರ ಬಿದ್ದು ಓರ್ವ ವ್ಯಕ್ತಿ ಸಾವುಕಂಡಿರುವ ಘಟನೆ ನಡೆದಿದ್ದು.ಆಗುಂಬೆ ಘಾಟಿಯ ಮೂರನೇ...

ಯುವಕನಿಗೆ ಚಾಕು ಇರಿತ ! ಮೆಗ್ಗಾನ್ ಆಸ್ಪತ್ರೆಗೆ ದಾಖಲು !

ಯುವಕನಿಗೆ ಚಾಕು ಇರಿತ ! ಮೆಗ್ಗಾನ್ ಆಸ್ಪತ್ರೆಗೆ ದಾಖಲು !

ಶಿವಮೊಗ್ಗ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮ ನವಮಿ ದಿನದಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ ನಡೆದು, ಇಬ್ಬರು ಹಿಂದು ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿದೆ.  ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆಗೆ ಪಡೆಯುತ್ತಿದ್ದು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಲ್ಲೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ನಲ್ಲೂರು ಕ್ಯಾಂಪ್‌ನಲ್ಲಿ 2022ರಲ್ಲೂ ಎರಡು ಕೋಮುಗಳ‌ ನಡುವೆ ಜಗಳ ಆಗಿತ್ತು. ಈ ಬಾರಿಯು ರಾಮನವಮಿ ದಿನದಂದು ಎರಡು ಕೋಮಿನ‌ ಯುವಕರ ನಡುವೆ ಗಲಾಟೆ ನಡೆದಿದೆ. ಹನುಮಂತ, ಗೋಪಿ ಎಂಬುವರಿಗೆ ಮುಸ್ಲಿಂ ಯುವಕರ ಗುಂಪು ಚಾಕು ಇರಿದಿತ್ತು. ಚಾಕು ಇರಿತದ ವೇಳೆ ಯುವಕರಿಗೆ ಗಂಭೀರ ಗಾಯವಾಗಿದೆ. ಗುರಾಯಿಸಿ...