ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ ! ಸಾಗರದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನ ! ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಪ್ರಕಾಶ್ ಹೆಗ್ಗೋಡು ಅವರನ್ನು ಈ ಹಿಂದೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನೆನ್ನೆ ಶನಿವಾರ ಅವರು ನಿಧನರಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕನ್ನಡದ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಪ್ರಕಾಶ್ ಹೆಗ್ಗೋಡು ಅವರು ಯೇಸುಪ್ರಕಾಶ್ ಕಲ್ಲುಕೊಪ್ಪ ಎಂದೇ ಖ್ಯಾತಿಗಳಿಸಿದ್ದರು. ಸಿನಿಮಾ, ರಂಗಭೂಮಿಗಳಲ್ಲಿ ಸಕ್ರಿಯರಾಗಿದ್ದ ಅವರು ಪರಿಸರ ಹೋರಾಟದಲ್ಲಿಯೂ ಮುಂಚೂಣಿಯಲ್ಲಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು...
ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ !
ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ ! ಶಿವಮೊಗ್ಗ : ಮನೆಯಲ್ಲಿಯೇ ವಿವಾಹಿತ ಸಾಪ್ಟ್‌ವೇರ್ ಉದ್ಯೋಗಿ ಮಹಿಳೆಯೊಬ್ಬರು ನೇಣಿಗೆ ಕೊರಳೋಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಾಡಿಕೊಪ್ಪದಲ್ಲಿ ನಡೆದಿದೆ. ಪತಿ ಹಾಗೂ ಆತನ ಮನೆಯ ಕಡೆಯವರ ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು. 29 ನೇ ತಾರೀಕು ಶನಿವಾರ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮೃತ ಮಹಿಳೆ ತನಿಗಾಗುತ್ತಿರುವ ಕಿರುಕುಳವನ್ನು ತನ್ನ ತವರು ಮನೆಯವರ ಹತ್ತಿರ ಹೇಳಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ತನ್ನ ತವರು ಮನೆಗೆ ಕರೆ ಮಾಡಿದ್ದ ಮಹಿಳೆಯ ಕಾಲ್ ರೆಕಾರ್ಡನ್ನು ಮಾಡಿಕೊಂಡಿದ್ದ ಮನೆಯವರು. ನಂತರ ವಿಚಾರಿಸಲು ಗಂಡನ ಮನೆಗೆ ಹೋಗಿದ್ದಾಗ ಆಕೆ ಬಾಗಿಲು ಹಾಕಿಕೊಂಡಿದ್ದಾರೆ. ತಟ್ಟಿದರು...
ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ! ಪೊಲೀಸರಿಗೆ ವಾರ್ನಿಂಗ್ !
ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ! ಪೊಲೀಸರಿಗೆ ವಾರ್ನಿಂಗ್ ! ಸಾಗರ : ಜಾತ್ರೆಯ ಬಂದೋಸ್ತ್ ನಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿ ವಾರ್ನಿಂಗ್ ನೀಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಗೌತಮ ಪುರದಲ್ಲಿ ನಡೆದಿದೆ. ಸಾಗರ ತಾಲೂಕಿನ ಆನಂದಪುರದ ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ನಡೆಯುತ್ತಿದೆ, ಡಿಆರ್ ಪೊಲೀಸ್ ಸಿಬ್ಬಂದಿ ಕಿರಣ್ ಎಂಬುವವರು ಜಾತ್ರಾ ಬಂದೋಬಸ್ತ್ ನಲ್ಲಿದ್ದರು, ಇವರ ಸಮ್ಮುಖದಲ್ಲಿ ಕೆಲ ಯುವಕರು ಗಲಾಟೆ ಮಾಡಿಕೊಳ್ಳುತ್ತಿದ್ದರು, ಅಂಗಡಿ ಮುಂಗಟ್ಟುಗಳ ಮುಂದೆ ದಾಂದಲೇ ಮಾಡುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇದನ್ನು ನೋಡಿದ ಪೊಲೀಸ್ ಸಿಬ್ಬಂದಿ ಕಿರಣ್ ಜಗಳ ಬಿಡಿಸಲು ಮುಂದಾಗಿದ್ದಾರೆ, ಈ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ....
ಶಿವಮೊಗ್ಗದಲ್ಲಿ ಎಂ ಬಿ ಬಿ ಎಸ್ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ !
ಶಿವಮೊಗ್ಗದಲ್ಲಿ ಎಂ ಬಿ ಬಿ ಎಸ್ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ! ಶಿವಮೊಗ್ಗ : ನಗರದಲ್ಲಿ ಎಂ ಬಿ ಬಿ ಎಸ್ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.. ನಗರದ ಸಿಮ್ಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸಿಮ್ಸ್ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತಿದದ್ದು, ಮೂರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ, ಚಿಕಿತ್ಸೆ ಪಲಕಾರಿಯಾಗದೆ ನೆನ್ನೆ ಅಂದರೆ ಶುಕ್ರವಾರ ರಾತ್ರಿ ಕೊನಯುಸಿರು ಎಳೆದಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮೂಲತಃ ಮಳವಳ್ಳಿಯ ನಿವಾಸಿಯಾಗಿರುವ ಯುವಕ ಶಿವಮೊಗ್ಗದ ಸಿಮ್ಸ್ ಹಾಸ್ಟೆಲ್ ನಲ್ಲಿಯೇ ಉಳಿದುಕೊಂಡಿದ್ದನು ಎಂದು ಹೇಳಲಾಗಿದೆ. ಇನ್ನೂ ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ...
ವಿದ್ಯಾರ್ಥಿಗಳು ಮಾಡಿದ ತಪ್ಪಿಗೆ ಶಿಕ್ಷಕರಿಗೆ ಬೆತ್ತದೇಟು ! ಶಿಷ್ಯರ ಮುಂದೆ ಮೇಷ್ಟ್ರ ವಿನೂತನ ಪ್ರಯೋಗ !
ವಿದ್ಯಾರ್ಥಿಗಳು ಮಾಡಿದ ತಪ್ಪಿಗೆ ಶಿಕ್ಷಕರಿಗೆ ಬೆತ್ತದೇಟು ! ಶಿಷ್ಯರ ಮುಂದೆ ಮೇಷ್ಟ್ರ ವಿನೂತನ ಪ್ರಯೋಗ ! ಶಿವಮೊಗ್ಗ : ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು ಪೆಟ್ಟು ಕೊಟ್ಟು ತಿದ್ದಿ ಸರಿ ದಾರಿಗೆ ತರುವಂತಹ ವ್ಯವಸ್ಥೆಯನ್ನು, ನಾವೆಲ್ಲರೂ ನೋಡಿದ್ದೇವೆ ಹಾಗೂ ನಾವೆಲ್ಲರೂ ಕೂಡ ನಮ್ಮ ನಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರಿಂದ ಪೆಟ್ಟು ತಿಂದು ಶಿಕ್ಷೆಯನ್ನು ಅನುಭವಿಸಿರುತ್ತೇವೆ. ತಪ್ಪು ಉತ್ತರ ನೀಡಿದಾಗ ಕಿವಿ ಹಿಂಡುವುದು, ಬಸ್ಕಿ ತೆಗೆಸುವುದು, ತಪ್ಪು ಉತ್ತರ ನೀಡಿದ ಪ್ರಶ್ನೆಯ ಉತ್ತರವನ್ನು ಹತ್ತತ್ತು ಬಾರಿ ಬರೆಸುವುದು, ವಿದ್ಯಾರ್ಥಿಗಳಿಂದಲೇ ಬೆತ್ತ ತರಿಸಿ ಹೊಡೆಯುವುದನ್ನು ನೋಡಿರುತ್ತೇವೆ. ಆದರೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತವರು ಕ್ಷೇತ್ರದಲ್ಲೊಬ್ಬರು ಶಿಕ್ಷಕರು ತಮ್ಮ ಶಿಷ್ಯರು ಮಾಡಿದ ತಪ್ಪಿಗೆ, ತಪ್ಪು ಉತ್ತರ ನೀಡಿದಾಗ, ವಿದ್ಯಾರ್ಥಿಗಳಿಗೆ ಪೆಟ್ಟು ನೀಡದೆ, ಅದರ ಸಲುವಾಗಿ ವಿದ್ಯಾರ್ಥಿಗಳಿಂದ ತಾವೇ ಪೆಟ್ಟು ತಿನ್ನುವಂತಹ ವ್ಯವಸ್ಥೆ ಒಂದನ್ನ ಅಳವಡಿಸಿಕೊಂಡಿರುವ ವ್ಯವಸ್ಥೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಾಲಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
ತುಂಗಾ ನದಿಯ ಸೇತುವೆಗಳಿಗೆ ಕಬ್ಬಿಣದ ಜಾಲರಿ ಅಳವಡಿಕೆ : ತುಂಗಾ ನದಿ ತಾಜ್ಯಕ್ಕೆ ಕಡಿವಾಣ
ತುಂಗಾ ನದಿಯ ಸೇತುವೆಗಳಿಗೆ ಕಬ್ಬಿಣದ ಜಾಲರಿ ಅಳವಡಿಕೆ : ತುಂಗಾ ನದಿ ತಾಜ್ಯಕ್ಕೆ ಕಡಿವಾಣ ಶಿವಮೊಗ್ಗ : ತುಂಗಾ ನದಿಗೆ ತ್ಯಾಜ್ಯ ಹಾಕುವು ದನ್ನು ತಪ್ಪಿಸುವ ಹಿನ್ನಲೆಯಲ್ಲಿ ನಗರದ ಹೊಳೆಬಸ್‌ಸ್ಟಾಪ್ ಬಳಿ ಇರುವ ಸೇತುವೆಯ ಮೇಲೆ ಜಾಲರಿಯನ್ನು ಹಾಕುವ ಕೆಲಸ ಭರದಿಂದ ಸಾಗಿದೆ. ಕೆಲವರು ತಮ್ಮ ಮನೆಗಳಲ್ಲಿ ಕಾರ್ಯಕ್ರಮಗಳನ್ನು ಮುಗಿಸಿ ಉಳಿದ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿ ಹೊಳೆಗೆ ಹಾಕುತ್ತಿದ್ದರು. ಅಕ್ಕಿ, ಕುಂಕುಮ, ಬಟ್ಟೆ ಬಾಳೆಹಣ್ಣು, ಹೀಗೆ ವಿವಿಧ ರೀತಿಯ ಪದಾರ್ಥಗಳನ್ನೆಲ್ಲಾ ನೀರಿಗೆ ಹಾಕಬೇಕು ಎಂಬ ನಂಬಿಕೆಯಿಂದ ಚಾನಲ್ ಅಥವಾ ಹೊಳೆಗೆ ಬೀಸಾಕುತ್ತಿದ್ದರು. ಪ್ರತಿ ದಿನವೂ ಒಂದು ಟನ್‌ಗೂ ಹೆಚ್ಚು ಕಸ ಹೊಳೆಯನ್ನು ಸೇರುತ್ತಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈಗಾಗಲೇ ಅಶುದ್ದಿಯಾಗಿದ್ದ ಹೊಳೆ ಈ ಕಸದಿಂದ ಮತ್ತಷ್ಟು ಕೊಳಚೆಯಾಗುತ್ತಿತ್ತು. ಇದನ್ನು...
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ?
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ? ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮಾರ್ಚ್ 24 ರಂದು ಶಿಕಾರಿಪುರದಲ್ಲಿ ಬೈಕ್ ರ್ಯಾಲಿಗೆ ಅನುಮತಿ ಪಡೆದಿದ್ದ ಕೆ ಎಸ್ ಈಶ್ವರಪ್ಪ ಅವರು ನಿಯಮ ಮೀರಿ ಬೈಕ್ ರ್ಯಾಲಿ ನಡೆಸಿದ್ದರು. 10 ಬೈಕ್, ಒಂದು ಜೀಪ್‌ಗೆ ಮಾತ್ರ ಅನುಮತಿ ಪಡೆದಿದ್ದರು. ಆದರೆ ರ್‍ಯಾಲಿಯಲ್ಲಿ 50ಕ್ಕೂ ಹೆಚ್ಚು ಬೈಕ್‌ಗಳು,...
BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ !
BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ ! ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ವಿವಿಧ ಕಡೆ ಎನ್ ಐ ಎ ದಾಳಿ ನಡೆಸಿದ ಬೆನ್ನಲ್ಲೇ , ಇದೀಗ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗದ ಗಾಂಧಿ ಬಜಾರ್ ನ ಕರಿದೇವರ ಕೇರಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಐದರಿಂದ ಎಂಟು ಅಧಿಕಾರಿಗಳ ತಂಡ ರಂಗನಾಥ ನಿಲಯದ ಐದನೇ ಅಂತಸ್ಥಿನ ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ.ಇದು ಬಿಬಿಎಂಪಿ ಇಂಜಿನಿಯರ್ ಒಬ್ಬರ ಕಟ್ಟಡವಾಗಿದ್ದು ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದು...
BREAKING NEWS : ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ದಾಳಿ !
BREAKING NEWS : ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ದಾಳಿ ! ಶಿವಮೊಗ್ಗ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿವಿಧ ಕಡೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗಡ್ಡೆ, ಇಂದಿರಾನಗರ, ಬೆಟ್ಟ ಮಕ್ಕಿ ಸೇರಿದಂತೆ ಐದಕ್ಕೂ ಹೆಚ್ಚು ಕಡೆ ದಾಳಿ ಮಾಡಿರುವ ಎನ್ ಐ ಎ ಅಧಿಕಾರಿಗಳು ರಾಮೇಶ್ವರಂ ಕೆಫೆ, ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಬೆಂಗಳೂರಿನಿಂದ 5ಕ್ಕೂ ಹೆಚ್ಚು ವಾಹನಗಳಲ್ಲಿ 15 ಕ್ಕೂ ಹೆಚ್ಚು ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಕೆಲ ಶಂಕಿತರ ಮನೆ ಮೇಲೆ ದಾಳಿ ನಡೆಸಿರುವ...
ಭದ್ರಾವತಿಯಲ್ಲಿ ಚಿರತೆ ಪ್ರತ್ಯಕ್ಷ ! ಕೊಟ್ಟಿಗೆಯಲ್ಲಿದ್ದ ಕುರಿಗಳನ್ನು ಬೇಟೆಯಾಡಿದ ಚಿರತೆ !
ಭದ್ರಾವತಿಯಲ್ಲಿ ಚಿರತೆ ಪ್ರತ್ಯಕ್ಷ ! ಕೊಟ್ಟಿಗೆಯಲ್ಲಿದ್ದ ಕುರಿಗಳನ್ನು ಬೇಟೆಯಾಡಿದ ಚಿರತೆ ! ಭದ್ರಾವತಿ : ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಚಿರತೆಗಳ ಹಾವಳಿ ಮುಂದುವರೆದಿದೆ. ಕೆಲ ತಿಂಗಳುಗಳ ಹಿಂದಷ್ಟೇ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಮಹಿಳೆಯೊಬ್ಬರು ಚಿರತೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದರು. ಇದೀಗ ಭದ್ರಾವತಿಯ ಗ್ರಾಮ ಒಂದರಲ್ಲಿ ಚಿರತೆ ಕಾಣಿಸಿಕೊಂಡಿದೆ. ಭದ್ರಾವತಿ ತಾಲೂಕಿನ ರತ್ನಾಪುರ ಗ್ರಾಮ ಎಂಬಲ್ಲಿ ಕೊಟ್ಟಿಗೆಯಲ್ಲಿದ್ದ ಎರಡು ಕುರಿಗಳನ್ನು ತಿಂದಿರುವ ಘಟನೆ ನಡೆದಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ರತ್ನಾಪುರ ಗ್ರಾಮದಲ್ಲಿ ನಂದಪ್ಪ ಎಂಬುವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎರಡು ಕುರಿಮರಿಗಳನ್ನು ಹೊತ್ತಯ್ದು ಕಬ್ಬಿನ ಗದ್ದೆಯಲ್ಲಿ ತಿಂದು ಹಾಕಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ









