ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿಗೆ ರಾಷ್ಟ್ರಪತಿ ಪದಕ ಶಿವಮೊಗ್ಗ : ಜಿಲ್ಲಾ ಹೆಚ್ಚುವರಿ ವರಿಷ್ಟಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿಗೆ 2023ನೇ ಸಾಲಿನ ರಾಷ್ಟ್ರಪತಿ ಪದಕ ದೊರೆತಿದೆ . ಒಟ್ಟು ಕರ್ನಾಟಕದ 18 ಜನರಿಗೆ 2023 ನೇ ಸಾಲಿನ ರಾಷ್ಟ್ರಪತಿ ಪದಕ ದೊರೆತಿದ್ದು , ಈ ಪೈಕಿ ಶಿವಮೊಗ್ಗದಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅನಿಲ್ ಕುಮಾರ್ ಭೂಮರೆಡ್ಡಿಯವರಿಗೆ ತಮ್ಮ ಮೂವತ್ತು ವರ್ಷದ ಸೇವೆ ಗುರುತಿಸಿ ಪ್ರಶಸ್ತಿ ಲಭಿಸದೆ ಎಂದು ತಿಳಿದು ಬಂದಿದೆ . ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಅನಿಲ್ ಕುಮಾರ್ ಭೂಮರೆಡ್ಡಿ ಮೂಲತಃ ಗದಗ ಜಿಲ್ಲೆಯವರಾಗಿದ್ದು . ಮೊದಲು ಪಿ ಎಸ ಐ ಆಗಿ ಇಲಾಖೆ ಗೆ ಸೇರ್ಪಡೆಗೊಂಡ ಇವರು ಈಗ ಶಿವಮೊಗ್ಗದಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿಯಾಗಿ...
ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಮತ್ತು ಸೂರಜ್ ರೇವಣ್ಣ ನಾಮನಿರ್ದೆಶನ
ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಮತ್ತು ಡಾ. ಸೂರಜ್ ರೇವಣ್ಣ ನಾಮನಿರ್ದೆಶನ ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಇಬ್ಬರು ಶಾಸಕರನ್ನು ನೇಮಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಮತ್ತು ಸೂರಜ್ ರೇವಣ್ಣ ಅವರನ್ನು ನೇಮಿಸಿ ಸಭಾಪತಿ ಅವರು ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ವಿಧಾನ ಪರಿಷತ್ತಿನ ಕಾರ್ಯದರ್ಶಿ ಅವರು ಕುವೆಂಪು ವಿವಿ ಕುಲ ಸಚಿವರಿಗೆ ಆದೇಶ ಪ್ರತಿ ರವಾನಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಚುಟುವಟಿಕೆ ಕುರಿತು ಶಾಸನಗಳು, ಆದೇಶಗಳು, ನಿಯಮಗಳನ್ನು ರಚಿಸಲು ವಿದ್ಯಾವಿಷಯಕ ಪರಿಷತ್ತಿಗೆ ರಾಜ್ಯ ವಿಧಾನ ಪರಿಷತ್ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನ ಪರಿಷತ್ ಶಾಸಕ...
ರಕ್ತದ ಗುಂಪಿನ ಮಾಹಿತಿ ಅವಶ್ಯಕ – ಡಾ. ಗುಡದಪ್ಪ ಕಸಬಿ
ರಕ್ತದ ಗುಂಪಿನ ಮಾಹಿತಿ ಅವಶ್ಯಕ – ಡಾ. ಗುಡದಪ್ಪ ಕಸಬಿ ಶಿವಮೊಗ್ಗ: ಪ್ರತಿಯೊಬ್ಬ ವ್ಯಕ್ತಿಯು ವೈಯುಕ್ತಿಕ ದಾಖಲೆ ವಿವರ ಇಟ್ಟುಕೊಳ್ಳುವಂತೆ ರಕ್ತದ ಗುಂಪಿನ ಮಾಹಿತಿಯ ಬಗ್ಗೆ ಅರಿತಿರಬೇಕು. ತುರ್ತು ಸಂದರ್ಭಗಳಲ್ಲಿ ರಕ್ತದ ಮಾಹಿತಿ ಇದ್ದರೆ ಅಗತ್ಯವಿರುವವರಿಗೆ ದಾನ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪ್ರಯೋಗ ಶಾಲೆ ತಾಂತ್ರಿಕ ಅಧಿಕಾರಿಗಳ ಸಂಘದ ಸಹಕಾರದಲ್ಲಿ ಇಂಟರಾಕ್ಟ್ ಮಕ್ಕಳು, ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ರಕ್ತದ ಗುಂಪು ತಪಾಸಣೆ ಹಾಗೂ ರಕ್ತದಾನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದ...
ಹೋರಿ ಹಬ್ಬದ ಮೆರವಣಿಗೆ ವೇಳೆ ಕಲ್ಲು ಕತ್ತಿಯಿಂದ ಹೊಡೆದಾಟ ! ಇಬ್ಬರಿಗೆ ಗಂಭೀರ ಗಾಯ
ಹೋರಿ ಹಬ್ಬದ ಮೆರವಣಿಗೆ ವೇಳೆ ಕಲ್ಲು ಕತ್ತಿಯಿಂದ ಹೊಡೆದಾಟ ! ಇಬ್ಬರಿಗೆ ಗಂಭೀರ ಗಾಯ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಚುಂಚಿನಕೊಪ್ಪ ತಾಂಡಾದಲ್ಲಿ ಹೋರಿ ಹಬ್ಬದ ಮೆರವಣಿಗೆಯ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಅದು ವಿಕೋಪಕ್ಕೆ ತಿರುಗಿ ಕಲ್ಲು ಕತ್ತಿಯಿಂದ ಮಾರಮಾರಿ ನಡೆದಿರುವ ಘಟನೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ 9:00 ಗಂಟೆಯ ವೇಳೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹೋರಿ ಹಬ್ಬದ ಮೆರವಣಿಗೆಯ ಸಂದರ್ಭದಲ್ಲಿ ಗ್ರಾಮದ ಗೂಡ್ಯಾನಾಯ್ಕ ಅವರ ಮನೆ ಮುಂದೆ ಹೋರಿ ಮೆರವಣಿಗೆಯ ಗುಂಪು ಪಟಾಕಿ ಸಿಡಿಸಿತ್ತು.ಇದರಿಂದ ತೀವ್ರ ಗದ್ದಲ ಉಂಟಾಗಿ.ಮನೆಯಲ್ಲಿ ಸಣ್ಣ ಮಕ್ಕಳು ಇದ್ದಾರೆ ಪಟಾಕಿ ಸಿಡಿಸಿ...
ಡಿವೈಎಸ್ಪಿ ಬಾಲರಾಜ್ ಸಿಐಡಿಗೆ ವರ್ಗಾವಣೆ ; ಸರ್ಕಾರ ಆದೇಶ
ಡಿವೈಎಸ್ಪಿ ಬಾಲರಾಜ್ ಸಿಐಡಿಗೆ ವರ್ಗಾವಣೆ ; ಸರ್ಕಾರ ಆದೇಶ ಶಿವಮೊಗ್ಗ : ನಗರದ ಡಿವೈಎಸ್‌ಪಿ ಬಾಲರಾಜ್ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಹಿಂದೆ ತೀರ್ಥಹಳ್ಳಿ ಯಲ್ಲಿ ಸರ್ಕಲ್ ಇನ್ ಸ್ಪೆಕ್ಟರ್ ಆಗಿದ್ದ ಬಾಲರಾಜ್ ಅದೆಷ್ಟೋ ಕ್ರೈಂ ಪ್ರಕರಣಗಳಿಗೆ ಜೀವ ನೀಡಿ ಆರೋಪಿಗಳಿಗೆ ಜೈಲು ಶಿಕ್ಷೆಯಾಗುವಂತೆ ಮಾಡಿದ್ದರು. ತೀರ್ಥಹಳ್ಳಿಯಲ್ಲಿ ನಕ್ಸಲರ ಹೆಸರಿನಲ್ಲಿ ಬೇರೆ ಗುಂಪೊಂದು ದರೋಡೆ ಮಾಡಿದ್ದನ್ನು ಬಾಲರಾಜ್ ಬಯಲಿಗೆಎಳೆದಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇಂಥ ಹತ್ತು ಹಲವು ಕ್ರೈಂಗಳ ನಿಖರ ತನಿಖೆ ನಡೆಸಿ, ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದರು. ಬಳಿಕ ಬಾಲರಾಜ್ ಬಿಜಾಪುರಕ್ಕೆ ವರ್ಗಾವಣೆಯಾಗಿದ್ದರು. ಆರಗ ಜ್ಞಾನೇಂದ್ರ ಗೃಹ ಸಚಿವರಾದಸಂದರ್ಭದಲ್ಲಿ ಬಾಲರಾಜ್ ಅವರನ್ನು ಮತ್ತೆ ಶಿವಮೊಗ್ಗ ನಗರದ ಡಿವೈಎಸ್‌ಪಿಯಾಗಿ ವರ್ಗಾವಣೆ ಮಾಡಿದ್ದರು. ಈಗ...
ಶಿವಮೊಗ್ಗ: ಫೇಸ್‌ಬುಕ್ ನಲ್ಲಿ ಸುಲಭ ಸಾಲದ ಜಾಹೀರಾತು ನೋಡಿ ಕರೆ ಮಾಡಿದಾತನಿಗೆ 36,500 ರೂ. ಪಂಗನಾಮ!
ಶಿವಮೊಗ್ಗ: ಫೇಸ್‌ಬುಕ್ ನಲ್ಲಿ ಸುಲಭ ಸಾಲದ ಜಾಹೀರಾತು ನೋಡಿ ಕರೆ ಮಾಡಿದಾತನಿಗೆ 36,500 ರೂ. ಪಂಗನಾಮ! ಶಿವಮೊಗ್ಗ : ಎರಡು ಲಕ್ಷ ರೂ.ವರೆಗೆ ಸುಲಭವಾಗಿ ಸಾಲ ದೊರೆಯಲಿದೆ ಎಂದು ಫೇಸ್ ಬುಕ್‌ನಲ್ಲಿದ್ದ ಜಾಹೀರಾತು ನಂಬಿ ಕರೆ ಮಾಡಿದ್ದ ಭದ್ರಾವತಿ ಯುವಕನಿಗೆ 36,500 ರೂ. ವಂಚನೆ ಮಾಡಿರುವ ಘಟನೆ ನಡೆದಿದೆ. ಜಾಹೀರಾತಿನಲ್ಲಿದ್ದ ಮೊಬೈಲ್ ನಂಬರ್‌ಗೆ ಭದ್ರಾವತಿಯ ಯುವಕ ಕರೆ ಮಾಡಿದ್ದ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕರೆ ಸ್ವೀಕರಿಸಿ ಮಾತನಾಡಿದ ವ್ಯಕ್ತಿ, ತಾವು ಮಂಗಳೂರಿನ ಫೈನಾನ್ಸ್ ಸಂಸ್ಥೆ ಎಂದು ಪರಿಚಯಿಸಿಕೊಂಡಿದ್ದ. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪ್ಯಾನ್ ಕಾರ್ಡ್ ವಿವರ ಕೊಡುವಂತೆ ತಿಳಿಸಿದ್ದ. ದಾಖಲೆಗಳನ್ನು ಕಳುಹಿಸುತ್ತಿದ್ದಂತೆ ಸಾಲ ಮಂಜೂರಾತಿ ಆಗಿದೆ. ಇದರ ಪ್ರೋಸೆಸ್ ಫೀಜ್, ಟ್ಯಾಕ್ಸ್ ಸೇರಿದಂತೆ ನಾನಾ ಕಾರಣಕ್ಕೆ...
ಕರೆಂಟ್ ಕಂಬವೇರಿ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು !
ಕರೆಂಟ್ ಕಂಬವೇರಿ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು ! ಶಿವಮೊಗ್ಗ : ಕರೆಂಟ್ ಕಂಬವೇರಿ ರಿಪೇರಿ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು ಕಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆ ಹೊನ್ನುರಿನಲ್ಲಿ ನಡೆದಿದೆ ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಸಮೀಪದ ಹೊಳೆಹೊನ್ನೂರಿನ ಕೈಮರ ಗ್ರಾಮದಲ್ಲಿ ಜ.22ರ ಬೆಳಿಗ್ಗೆ 10.30ರ ಸುಮಾರಿಗೆ ಸಂಭವಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಲೈನ್ ಮ್ಯಾನ್ ಚಂದ್ರ ಶೇಖರ ಲಮಾಣಿ (27) ಮೃತಪಟ್ಟವರು. ವಿದ್ಯುತ್ ಕಂಬವೇರಿ ರಿಪೇರಿ ಮಾಡುವ ಸಂದರ್ಭ ವಿದ್ಯುತ್ ತಗುಲಿದ ಪರಿಣಾಮ ಈ ಅವಘಡ ಸಂಭವಿಸಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಹಿಳೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರತಿಕ್ರಿಯೆ !
ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಹಿಳೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರತಿಕ್ರಿಯೆ ! ಶಿವಮೊಗ್ಗ : ಶಿವಮೊಗ್ಗದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, 500 ವರ್ಷಗಳ ಕನಸು ಇಂದು ನನಸಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಮಹಿಳೆಯೊಬ್ಬಳು, ಶ್ರೀರಾಮಸೇನೆ ಕಾರ್ಯಕರ್ತರು ಸಿಹಿ ಹಂಚುವ ವೇಳೆ “ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿರುವುದು ನನ್ನ ಗಮನಕ್ಕೂ ಬಂದಿದೆ. ಆಕೆ ಹುಚ್ಚಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಆದರೆ, ಆಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡಿದ್ದಾರೆ. ಇದು ಖಂಡನೀಯವಾಗಿದ್ದು, ಆ ಮಹಿಳೆಯನ್ನು ವಶಕ್ಕೆ ಪಡೆದು ತನಿಖೆ ಮಾಡಬೇಕು. ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮಹಿಳೆ ಮೇಲೆ...
ಶಿವಗಂಗಾ ರಾಘವ ಶಾಖೆಯಲ್ಲಿ ರಾಮತಾರಕ ಮಂತ್ರ
ಶಿವಗಂಗಾ ರಾಘವ ಶಾಖೆಯಲ್ಲಿ ರಾಮತಾರಕ ಮಂತ್ರ ಶಿವಮೊಗ್ಗ: ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಪಟ್ಟಾಭಿಷೇಕದ ಪ್ರಯುಕ್ತ ಶಿವಮೊಗ್ಗ ನಗರದ ಶಿವಗಂಗಾ ಯೋಗಕೇಂದ್ರದ ರಾಘವ ಶಾಖೆಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ 108 ತಾರಕ ಮಂತ್ರ ಪಠಣೆ ನಡೆಸಲಾಯಿತು. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಶ್ರೀ ರಾಮನಿಗೆ ವಿಶೇಷ ಪೂಜೆ, ರಾಮ ಮಂತ್ರ ಪಠಣೆ, ಭಜನೆ, ವಿವಿಧ ಪೂಜೆಗಳ ಆಚರಣೆ ನಡೆಸುತ್ತಿದ್ದು, ಶಿವಮೊಗ್ಗದಲ್ಲಿಯೂ ರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಯೋಗ ನಮನ ಹಾಗೂ 108 ರಾಮ ತಾರಕ ತಾರಕ ಮಂತ್ರ ಪಠಿಸಲಾಯಿತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕುರಿತು ಯೋಗ ಕಲಿಕಾರ್ಥಿಗಳು ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ ಹರ್ಷೋದ್ಗಾರ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶಿವಗಂಗಾ...
ಹೋರಿ ಬೆದರಿಸುವ ಸ್ಪರ್ಧೆ : ಹೋರಿ ತಿವಿದು ಯುವಕ ಸಾವು
ಹೋರಿ ಬೆದರಿಸುವ ಸ್ಪರ್ಧೆ : ಹೋರಿ ತಿವಿದು ಯುವಕ ಸಾವು ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾನೆ. . ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ರಾಮು (26) ಹೋರಿ ತಿವಿದು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ತೆರಳಿದ್ದ ವೇಳೆ ಹೋರಿ ಕುತ್ತಿಗೆಗೆ ತಿವಿದು ರಾಮು ಗಾಯಗೊಂಡಿದ್ದ. ಕೂಡಲೇ ಆತನನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಯುವಕ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರಂತೆ. ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಕೂಡ ಇದೇ ಗ್ರಾಮದಲ್ಲಿ...



