ಡಿ.22 ರಂದು ಶಿವಮೊಗ್ಗದಲ್ಲಿ ಸಿರಿಧಾನ್ಯ ನಡಿಗೆ, 27 ರಂದು ಸಿರಿ ಧಾನ್ಯ ಮೇಳ ಆಯೋಜನೆ ಶಿವಮೊಗ್ಗ : ಜಿಲ್ಲಾ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ನಡಿಗೆ(ವಾಕಥಾನ್) ಹಾಗೂ ಸಿರಿಧಾನ್ಯ ಮೇಳಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಸಿರಿಧಾನ್ಯ ಮೇಳ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿರಿಧಾನ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹಾಗೂ ಅವುಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಡಿ.22 ರಂದು ಸಿರಿಧಾನ್ಯ ನಡಿಗೆ ಮತ್ತು ಡಿ.27 ರಂದು ಸಿರಿಧಾನ್ಯ ಮೇಳವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಡಿ.22 ರಂದು ಬೆಳಿಗ್ಗೆ 6.30 ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಗಿಡಗಳನ್ನು ನೆಡುವ ಮೂಲಕ ಸಿರಿಧಾನ್ಯ ವಾಕಥಾನ್ಗೆ ಚಾಲನೆ ನೀಡಲಾಗುವುದು. ವಾಕಥಾನ್ ನೆಹರೂ ಕ್ರೀಡಾಂಗಣದಿಂದ ಹೊರಟು ಮಹಾವೀರ ವೃತ್ತ, ಗೋಪಿ ವೃತ್ತ, ಜೈಲ್ ವೃತ್ತ, ಎಸ್.ಎಂ ವೃತ್ತದಿಂದ ಸಾಗಿ ಬಂದು ನೆಹರೂ ಕ್ರೀಡಾಂಗಣ...
STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ
STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ ಬೆಂಗಳೂರು : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಆರೋಪಿಯಿಂದ ದಂಡದ ಮೊತ್ತ ( ಫೈನ್) ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೆ.ಆರ್.ಪೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ.ಟಿ.ನಟರಾಜು ಸಲ್ಲಿಸಿದ ಅರ್ಜಿ ಪುರಸ್ಕರಿಸಿದ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿದೆ. ಹೆಲೈಟ್ ಧರಿಸದೇ ಇರುವುದಕ್ಕೆ ಫೈನ್ ಕಟ್ಟಲು ನಿರಾಕರಿಸಿದ ಮತ್ತು ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದ ಆರೋಪಸಂಬಂಧ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ.ಆರ್.ಪೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ.ಟಿ.ನಟರಾಜು ಅರ್ಜಿ ಸಲ್ಲಿಸಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ !
ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ ! ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮಧ್ಯಕರ್ನಾಟಕದ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭವಾಗುತ್ತಿದೆ. ರೋಟರಿ ಕ್ಲಬ್ ಶಿವಮೊಗ್ಗ ಹಾಗೂ ಸರ್ಜಿ ಆಸ್ಪತ್ರೆಗಳ ಸಹಯೊಗದೊಂದಿಗೆ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಡಿಸೆಂಬರ್ 20ರಂದು ಅಮೃತ ಬಿಂದು ಹೆಸರಿನಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್ ಉದ್ಘಾಟನೆಯಾಗಲಿದೆ. ಕೋಡಿಮಠದ ದಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಎದೆಹಾಲಿನ ಬ್ಯಾಂಕ್ ಉದ್ಘಾಟಿಸಲಿದ್ದಾರೆ ಎಂದು ಸರ್ಜಿ ಆಸ್ಪತ್ರೆ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಬೆಂಗಳೂರು, ಬೆಳಗಾವಿ, ಧಾರವಾಡ, ಮಂಗಳೂರಿನಲ್ಲಿ ಮಿಲ್ಕ್ ಬ್ಯಾಂಕ್ ಈಗಾಗಲೇ ಸ್ಥಾಪನೆಗೊಂಡಿದೆ....
ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದ್ದೇನು ?
ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದ್ದೇನು ? ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಜಿಂಕೆ ಶಿಕಾರಿಯನ್ನು ಮಾಡಿದ ಮಾಹಿತಿಯನ್ನು ಆಧರಿಸಿ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮಂಡಗದ್ದೆ ಅರಣ್ಯ ವಲಯದ ಗ್ರಾಮವೊಂದರಲ್ಲಿ ಜಿಂಕೆ ಶಿಕಾರಿ ಆಗಿದೆ ಎಂಬ ಮಾಹಿತಿಯನ್ನು ಅಪರಿಚಿತ ವ್ಯಕ್ತಿಗಳು ಅರಣ್ಯ ಅಧಿಕಾರಿಗಳಿಗೆ ಕೊಟ್ಟಿದ್ದಾರೆ, ಮಾಹಿತಿಯ ಮೂಲವನ್ನು ಆಧರಸಿ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಓರ್ವನನ್ನು ಬಂಧಿಸಿದ್ದಾರೆ. ಇನ್ನೂ ಉಳಿದ ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ , ಬಂಧನವಾದ ವ್ಯಕ್ತಿ ತಮಿಳುನಾಡು ಮೂಲದವನು ಎಂಬ ಮಾಹಿತಿ ಲಭ್ಯವಾಗಿದೆ. ದಾಳಿ ಮಾಡುವ ಸಂದರ್ಭದಲ್ಲಿ ಡಿಸಿಎಫ್ ಶಿವಶಂಕರ್, ಎಸಿಎಫ್ ಪ್ರಕಾಶ್ ಮಾರ್ಗದರ್ಶನದಲ್ಲಿ ತಂಡ ಕಾರ್ಯಾಚರಣೆ ನಡೆಸಿದೆ. ಡಿಆರ್ ಎಫ್ಓ ಸುಹಾಸ್, ಗಸ್ತು ಅರಣ್ಯ ಪಾಲಕರಾದ ದುರುಗಪ್ಪ, ಮಹಾದೇವ ಕಣ್ಣೂರ, ವಾಹನ ಚಾಲಕ ನವೀನ್ ಮುಂತಾದವರು ಇದ್ದರು. ವರದಿ :...
ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ
ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ ಶಿವಮೊಗ್ಗ : ಭದ್ರಾವತಿಯ ಬಿಜೆಪಿ ಕಾರ್ಯಕರ್ತ ಗೋಕುಲ್ ಅವರ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂ ಧಿಸಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋಕುಲ್ ಅವರ ಆರೋಗ್ಯ ವಿಚಾರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಯುವಮೋರ್ಚಾ ಪದಾಧಿಕಾರಿ ಗೋಕುಲ್ ಮೇಲೆ ಶಾಸಕರ ಕಡೆಯವರು ಹಲ್ಲೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಆದರೆ ಕಾಂಗ್ರೆಸ್ ಮುಖಂಡರು ಗೋಕುಲ್ ಮೇಲೆಯೇ ಕೇಸು ದಾಖಲಿಸಿದ್ದಾರೆ. ಇದೆಲ್ಲ ಸರಿಯಲ್ಲ ಎಂದರು. ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳಿಗೆ ದೂರು ಕೊಟ್ಟರೂ ನಿರ್ಲಕ್ಷé...
ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ !
ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ ! ಶಿವಮೊಗ್ಗ : ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ ಮತ್ತು ಕಾರ್ಗಳ ಪಾರ್ಕಿಂಗ್ಗೆ ಕೆಳಕಂಡಂತೆ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್.ರವರು ಅಧಿಸೂಚನೆ ಹೊರಡಿಸಿ ಕೆಳಕಂಡಂತೆ ಆದೇಶ ನೀಡಿರುತ್ತಾರೆ. ವಾಹನಗಳ ನಿಲುಗಡೆ ನಿಷೇಧಿತ ಸ್ಥಳ (ನೋ ಪಾರ್ಕಿಂಗ್); ಬಸವೇಶ್ವರ (ಡಿವಿಎಸ್) ಸರ್ಕಲ್ನ ಸುತ್ತ 50 ಮೀ, ಮಹಾವೀರ ಸರ್ಕಲ್ನ ಸುತ್ತ 50 ಮೀ., ಶಿವಮೂರ್ತಿ ಸರ್ಕಲ್ ಸುತ್ತ 50 ಮೀ, ಅಕ್ಕಮಹಾದೇವಿ (ಉಷಾ ನರ್ಸಿಂಗ್ ಹೋಂ) ಸರ್ಕಲ್ ಸುತ್ತ 50 ಮೀ ಹಾಗೂ ಕಮಲಾ ನರ್ಸಿಂಗ್ ಹೋಂನಿಂದ ಗಾಂಧಿನಗರ ಕ್ರಾಸ್ವರೆಗೆ ಎಲ್ಲಾ ವಾಹನಗಳ ನಿಲುಗಡೆ ನಿಷೇದಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಫೇಸ್‌ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುವ ಮುನ್ನ ಇರಲಿ ಎಚ್ಚರ ! ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಬರೋಬ್ಬರಿ 7 ಲಕ್ಷ ವಂಚಿಸಿದ ಭೂಪ !
ಫೇಸ್‌ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುವ ಮುನ್ನ ಇರಲಿ ಎಚ್ಚರ ! ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಬರೋಬ್ಬರಿ 7 ಲಕ್ಷ ವಂಚಿಸಿದ ಭೂಪ ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ. ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಭರತ್ ಕುಮಾರ್’ಗೆ ಫೇಸ್ ಬುಕ್’ನಲ್ಲಿ ಪರಿಚಯ ಮಾಡಿಕೊಂಡ ಆರೋಪಿಗಳು...
ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ !
ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ ! ಶಿವಮೊಗ್ಗ : ಬೈಕ್ ಮಾರ್ಪಡಿಸಿ ಕರ್ಕಶವಾದ ಹಾರ್ನ್ ಅಳವಡಿಸಿ ಪುಂಡಾಟ ಮೆರೆಯುತ್ತಿದ್ದ ಯುವವಕನೊಬ್ಬನಿಗೆ ಶಿವಮೊಗ್ಗ ಕೋರ್ಟ್ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ 19 ವರ್ಷದ ಧನಂಜಯ ಎಂಬ ಯುವಕ ತನ್ನ ಬಳಿ ಇದ್ದ ಬಜಾಜ್ ಕವಾಸಕಿ ಬೈಕ್ ನ್ನು ಆರ್.ಎಕ್ಸ್-100 ರೀತಿ ಕಾಣುವಂತೆ ಮಾರ್ಪಡಿಸಿ, ಅದಕ್ಕೆ ಕರ್ಕಶ ಹಾರ್ನ್ ಅಳವಡಿಸಿದ್ದ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಯುವಕನ ಬೈಕ್ ಶಬ್ದದಿಂದ ಕಿರಿಕಿರಿ ಅನುಭವಿಸಿದ ಸಾರ್ವಜನಿಕರು ಪೂರ್ವ ಸಂಚಾರಿ ಠಾಣೆಯಲ್ಲಿ ದೂರು ನೀಡಿದ್ದರು. ಸಬ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಮಠಪತಿ, ಯುವಕನ ಬೈಕ್ ಪತ್ತೆ ಮಾಡಿ...
ಕಾನ್‍ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾನ್‍ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (ಸಿಎಪಿಎಫ್) ಮತ್ತು ಎಸ್‍ಎಸ್‍ಎಫ್ ಪಡೆಗಳಲ್ಲಿ ಕಾನ್‍ಸ್ಟೇಬಲ್ ಮತ್ತು ಅಸ್ಸಾಂ ರೈಫಲ್‍ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ https://ssc.nic.in or www.sskkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಕೊನೆಯ ಡಿ.31 ಕೊನೆಯ ದಿನ. ಮತ್ತು ಅಭ್ಯರ್ಥಿಗಳು 18 ರಿಂದ 23 ವರ್ಷ ವಯೋಮಾನದವರಾಗಿರಬೇಕು, (ಪ.ಜಾತಿ/ಪ.ಪಂಗಡ ಮತ್ತು ಒ.ಬಿ.ಸಿ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಡಿಲಿಕೆ ಇರುತ್ತದೆ). ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 08025502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂ. ಸಂ :...
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ