ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದ ಕಾರು ! ತಪ್ಪಿದ ಭಾರಿ ಅನಾಹುತ ! ಶಿವಮೊಗ್ಗ : ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಕಾರು ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದ್ದು. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ, ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಜನ ಇದ್ದರು ಎಂಬ ಮಾಹಿತಿ ವರದಿಯಾಗಿದೆ. ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿ ಇದ್ದವರು ಚಿಕ್ಕಮಗಳೂರು ಮೂಲದವರು ಎಂದು ತಿಳಿದು ಬಂದಿದೆ. ಅದೃಷ್ಟವಾಸತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಣಪತಿ ದೇವಸ್ಥಾನದ ಕಟ್ಟೆಯ ಮೇಲೆ ದಿನನಿತ್ಯ ಶಾಲೆ ಮಕ್ಕಳು, ಹಿರಿಯರು ಊರಿನ ಗ್ರಾಮಸ್ಥರು ಕುಳಿತುಕೊಳ್ಳುತ್ತಿದ್ದರು. ಘಟನೆ ನಡೆದ ಸಂದರ್ಭದಲ್ಲಿ ಯಾರೂ ಕೂಡ ಕಟ್ಟೆಯ ಮೇಲೆ ಇರಲಿಲ್ಲ ಹಾಗಾಗಿ ಭಾರಿ ಅನಾಹುತ ತಪ್ಪಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ ಜಾಹಿರಾತು...
2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ. ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 2, 2024ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 22,2024ರವರೆಗೂ ಪರೀಕ್ಷೆ ನಡೆಯಲಿದೆ. ಇದರ ಜೊತೆಗೆ ಎಸ್ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೂ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಇನ್ನು ಮೂರು ತಿಂಗಳ ಮುಂಚಿತವಾಗಿಯೇ 2023-24 ನೇ ಸಾಲಿನ ವಾರ್ಷಿಕ ಪರೀಕ್ಷೆ -1ರ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ. ಮಂಡಳಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 15ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಜಾಹಿರಾತು : ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: chairpersonkseab@gmail.comಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...
ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ
ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಶಿವಮೊಗ್ಗ : ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶಿಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಡಿಸೆಂಬರ್ 6 ರಿಂದ 10 2023ರ ವರೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಶಿವಮೊಗ್ಗದಲ್ಲಿ ಮೊಟ್ಟ ಮೊದಲ ಬಾರಿಗೆ ಬೃಹತ್ ಸ್ವದೇಶಿ ಮೇಳವನ್ನು ಆಯೋಜಿಸಲಾಗಿದೆ ಎಂದು ಸ್ವದೇಶಿ ಜಾಗರಣ ಮಂಚ್ ದಕ್ಷಿಣ ಮಧ್ಯ ಕ್ಷೇತ್ರಿಯ ಸಂಘಟಕ್ ಕೆ ಜಗದೀಶ್ ಹೇಳಿದರು. ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತ್ರಿಕಾಗೋಷ್ಠಿ ನಡೆಸಿದ ಸ್ವದೇಶಿ ಮೇಳದ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸ್ವದೇಶಿ ಮೇಳದಲ್ಲಿ ಏನೆಲ್ಲ ವಿಶೇಷತೆಗಳಿವೆ.? ಶಿವಮೊಗ್ಗದ ಜನತೆಗೆ ಸ್ವದೇಶಿ ಮೇಳದಿಂದ ಆಗುವ ಉಪಯೋಗವೇನು...
ವಿಶ್ವ ಏಡ್ಸ್ ದಿನಾಚರಣೆ : ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕು- ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್.
ವಿಶ್ವ ಏಡ್ಸ್ ದಿನಾಚರಣೆ : ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕು- ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಶಿವಮೊಗ್ಗ :ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು ಅವರು ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಮಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸುಬ್ಬಯ್ಯ ನರ್ಸಿಂಗ್ ಕಾಲೇಜ್, ಬಾಪೂಜಿ ನರ್ಸಿಂಗ್ ಕಾಲೇಜ್, ನ್ಯಾಷನಲ್ ಲಾ ಕಾಲೇಜ್, ಎಫ್.ಪಿ.ಎ.ಐ ಶಿವಮೊಗ್ಗ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ಏರ್ಪಡಿಸಲಾಗಿದ್ದ “ಸಮುದಾಯಗಳು ಮುನ್ನಡೆಸಲಿ” ಜಾಥಾಕ್ಕೆ ಚಾಲನೆ...
ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ
ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ ಶಿವಮೊಗ್ಗ: ಕಣ್ಣುಗಳು ಮನುಷ್ಯದ ದೇಹದ ಪ್ರಮುಖ ಅಂಗ ಆಗಿದ್ದು, ಸಕಾಲದಲ್ಲಿ ಕಣ್ಣುಗಳ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ವರ್ಷಾ ಅಭಿಪ್ರಾಯಪಟ್ಟರು. ಕಸ್ತೂರ ಬಾ ಬಾಲಿಕಾ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ನೇತ್ರ ತಪಾಸಣಾ ಹಾಗೂ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಣ್ಣಿನಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಕಣ್ಣು ಸೂಕ್ಷ್ಮ ಭಾಗ ಸಹ ಆಗಿರುವುದರಿಂದ ಎಚ್ಚರಿಕೆ ವಹಿಸಬೇಕು. ಮಕ್ಕಳು ಬಾಲ್ಯದಲ್ಲೇ ತಪಾಸಣೆ ನಡೆಸುವ ಜತೆಯಲ್ಲಿ ಕಾಲ ಕಾಲಕ್ಕೆ ಪರೀಕ್ಷೆ ನಡೆಸಬೇಕು. ಸಮಸ್ಯೆಗಳಿದ್ದಲ್ಲಿ ಕೂಡಲೇ ಸರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಆರ್ಥಿಕವಾಗಿ ಹಿಂದುಳಿದವರಿಗೆ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಇತ್ತೀಚೆಗೆ...
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ತೆಲಂಗಾಣದಲ್ಲಿ ಬಿಆರ್ಎಸ್ ಹಿನ್ನಡೆ ಸಾಧಿಸಲಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯುವ ಬಗ್ಗೆ ಭವಿಷ್ಯ ನುಡಿಯಲಾಗಿದೆ. ಐದು ರಾಜ್ಯಗಳಿಗೆ ಏಕಕಾಲದಲ್ಲಿ ಚುನಾವಣೆ ಘೋಷಣೆ ಮಾಡಲಾಗಿತ್ತು. ನ.7ರಂದು ಮಿಜೋರಾಂನ ಎಲ್ಲ 40 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆದಿತ್ತು. ಛತ್ತೀಸ್‌ಗಢದ 90 ಕ್ಷೇತ್ರಗಳಿಗೆ ನ.7 ಮತ್ತು ನ.17ರಂದು ಎರಡು ಹಂತದಲ್ಲಿ ಚುನಾವಣೆ...
ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಕುಂಸಿ ಮೆಸ್ಕಾಂ ಉಪ ವಿಭಾಗ ಕುಂಸಿ ಮತ್ತು ಹಾರನಹಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವು ಹಿನ್ನಲೆ ನಾಳೆ ದಿನಾಂಕ ಡಿ.1 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮ ನಗರ, ಮುದುವಾಲ, ಯಡವಾಲಾ ಕೊನಗವಳ್ಳಿ ಹಿಟ್ಟೂರು, ನಾರಾಯಣಪುರ, ರಟ್ಟೆಹಳ್ಳಿ, ಸುತ್ತು ಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ವಾಲ, ದೇವಬಾಳ, ತ್ಯಾಜವಳ್ಳಿ, ಮೆಸ್ಕಾಂ ಪ್ರಕಟಣೆ ನೀಡಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವೀರಯೋಧ ಪ್ರಾಂಜಲ್‌ಗೆ ನುಡಿನಮನ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವೀರಯೋಧ ಪ್ರಾಂಜಲ್‌ಗೆ ನುಡಿನಮನ ಶಿವಮೊಗ್ಗ: ಕ್ಯಾಪ್ಟನ್ ಪ್ರಾಂಜಲ್ ಸ್ಕೌಟ್ ಆಗಿ, ರೋವರ್ ಆಗಿ ವಿವಿಧ ಹಂತಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಾಂಜಲ್ ಇಂಜಿನಿಯರ್ ಪದವಿ ಹುದ್ದೆ ಬಿಟ್ಟು ದೇಶಸೇವೆಗಾಗಿ ಜೀವನ ಮುಡಿಪಿಟ್ಟರು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಹೇಳಿದರು. ಶಿವಮೊಗ್ಗ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೀರಯೋಧ, ಭಾರತದ ಹೆಮ್ಮೆಯ ಪುತ್ರ, ಕ್ಯಾಪ್ಟನ್ ಎಂ.ವಿ.ಪ್ರಾಂಜಲ್‌ಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಕ್ಯಾಪ್ಟನ್ ಪ್ರಾಂಜಲ್ ಅವರು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ರಾಷ್ಟ್ರ ರಕ್ಷಣೆಯ ಕಾರ್ಯದ ಸಂದರ್ಭದಲ್ಲಿ ಉಗ್ರರ ದಾಳಿಯಲ್ಲಿ ಭಾರತ ಮಾತೆಯ ಮಡಿಲಿಗೆ ತನ್ನನ್ನು ಸಮರ್ಪಿಸಿಕೊಂಡಿದ್ದಾರೆ. ಇಂತಹ ಸೈನಿಕರು ದೇಶದ ಶಕ್ತಿ ಎಂದು ತಿಳಿಸಿದರು. ಇದೇ ಸಂಧರ್ಭದಲ್ಲಿ ಜಿಲ್ಲಾ ಸ್ಕೌಟ್ ಆಯುಕ್ತ ಕೆ.ಪಿ.ಬಿಂದುಕುಮಾರ್ ಮಾತನಾಡಿ, ನಮ್ಮ...
ಅತಿಥಿ ಉಪನ್ಯಾಸಕರ ಮುಷ್ಕರ : ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ತರಗತಿಗಳು ನಡೆಯುತ್ತಿಲ್ಲ – ವಿದ್ಯಾರ್ಥಿನಿಯರಿಂದ ಉಪವಿಭಾಗಧಿಕಾರಿಗಳಿಗೆ ಮನವಿ
ಅತಿಥಿ ಉಪನ್ಯಾಸಕರ ಮುಷ್ಕರ : ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ತರಗತಿಗಳು ನಡೆಯುತ್ತಿಲ್ಲ – ವಿದ್ಯಾರ್ಥಿನಿಯರಿಂದ ಉಪವಿಭಾಗಧಿಕಾರಿಗಳಿಗೆ ಮನವಿ ಸಾಗರ : ಅತಿಥಿ ಉಪನ್ಯಾಸಕರ ಮುಷ್ಕರದಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ನಮ್ಮ ಕಲಿಕೆಗೆ ಪೆಟ್ಟು ಬೀಳುತ್ತಿದೆ, ತರಗತಿಗಳು ನಡೆಯುತ್ತಿಲ್ಲ ಎಂದು ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸರ್ಕಾರ ತಕ್ಷಣ ಅವರ ಬೇಡಿಕೆ ಈಡೇರಿಸಿ ಎಂದಿನಂತೆ ತರಗತಿಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಬುಧವಾರ ವಿದ್ಯಾರ್ಥಿನಿಯರು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು. ಸಾಗರದ ಪ್ರತಿಷ್ಠಿತ ಶ್ರೀಮತಿ ಇಂದಿರಾ ಗಾಂಧಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನಲ್ಲಿ ಪಾಠ ಪ್ರವಚನಗಳಿಗೆ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದ್ದು, ಅತಿಥಿ ಉಪನ್ಯಾಸಕರೇ ತರಗತಿಗಳನ್ನ ನಡೆಸುತ್ತಿದ್ದರು. ನಮಗೆ ಪರೀಕ್ಷೆ ಸಮೀಪಿಸುತ್ತಿದೆ. ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ನಮ್ಮ ಕಲಿಕೆಗೆ ಹಿನ್ನಡೆ ಆಗಬಹುದೆಂಬ ಆತಂಕ ಎದುರಾಗಿದೆ. ಕರ್ನಾಟಕ ಸರ್ಕಾರ ತಕ್ಷಣ ಅತಿಥಿ...
ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್!
ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್! ಶಿವಮೊಗ್ಗ : 2019 ಮಾರ್ಚ್ 5 ರಂದು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಬೆದರಿಸಿ ದರೋಡೆ ಮಾಡಿದ್ದ ಆರು ಜನ ಆರೋಪಿಗಳಿಗೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಶಿವಮೊಗ್ಗ, ಪೀಠಾಸೀನ ಭದ್ರಾವತಿಯಲ್ಲಿ 2 ಪ್ರಕರಣಗಳ ವಿಚಾರಣೆ ನಡೆದು ಆರೋಪಿತರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧಿಶರಾದ ಶ್ರೀ ಆರ್ ವೈ ಶಶಿಧರ ರವರು ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ದಿನಾಂಕ 2019 ಮಾರ್ಚ್ 5 ರಂದು ಆರು ಜನರ ಅಪರಿಚಿತರ ತಂಡವೊಂದು ಎರಡು ಬೈಕ್ ಗಳಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆಯೊಡ್ಡಿ ರೂ 20,000/- ನಗದು ಮತ್ತು ಐ-ಪಾಡ್ ಮತ್ತು ಐ-ಫೋನ್ ಅನ್ನು ದರೋಡೆ ಮಾಡಿಕೊಂಡು ಹೋಗಿದ್ದರು, ಅದೇ ದಿನ ರಾತ್ರಿ ಆರು ಜನ ಅಪರಿಚಿತರು ಎರಡು ಬೈಕ್ ಗಳಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆಯೊಡ್ಡಿ ರೂ 500...