ತೀರ್ಥಹಳ್ಳಿ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಭಾರತಿಪುರ ಫ್ಲೈ ಓವರ್‌ನ ಒಂದು ಭಾಗವನ್ನು ಸಂಚಾರಕ್ಕೆ ಮುಚ್ಚಲಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿ ಇದಕ್ಕೆ ಕಾರಣವಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮಳೆಗಾಲದಲ್ಲಿ ಭೂಕುಸಿತ ಸಾಮಾನ್ಯವಾದರೂ, ಭಾರತಿಪುರದಲ್ಲಿನ ಈ ಧರೆ ಕುಸಿತದ ಭೀತಿಗೆ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರೇ ನೇರ ಕಾರಣ ಎಂದು ಸಾರ್ವಜನಿಕ...