ಶಿವಮೊಗ್ಗ: ಪದವಿಪೂರ್ವ ಶಿಕ್ಷಣ (ಪಿಯುಸಿ) ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಲ್ಲಿ ಖಾಯಂ ಉದ್ಯೋಗ ಪಡೆಯಲು ಸುವರ್ಣಾವಕಾಶ ಒದಗಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗ (SSC) ತನ್ನ ಸಂಯೋಜಿತ ಉನ್ನತ ಮಾಧ್ಯಮಿಕ ಮಟ್ಟದ (CHSL) 2025 ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 3,131 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ...