ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆಯ ನೌಕರರು ನಾಳೆಯಿಂದ (ಜುಲೈ 8, 2025, ಮಂಗಳವಾರ) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿ ಕರೆ ಮೇರೆಗೆ ಶಿವಮೊಗ್ಗ ಘಟಕವೂ ಈ ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ. ಇದರಿಂದಾಗಿ ನಗರದ ಸಾರ್ವಜನಿಕ ಸೇವೆಗಳಾದ ಸ್ವಚ್ಛತೆ, ಕಂದಾಯ ಸಂಗ್ರಹ ಸೇರಿದಂತೆ ಪಾಲಿಕೆಯ ಎಲ್ಲಾ ವಿಭಾಗಗಳ ಕಾರ್ಯಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿವೆ. ಬೇಡಿಕೆಗಳೇನು? ಮಹಾನಗರ ಪಾಲಿಕೆ ನೌಕರರ ಸಂಘದ ಪ್ರಮುಖ ಬೇಡಿಕೆಗಳು ಇಂತಿವೆ: ಸರ್ಕಾರಿ ನೌಕರರಿಗೆ...
