ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್ 26, 2025ರವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಜೂನ್ 22ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶ ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗಾಳಿಯೊಂದಿಗೆ...