ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆಯ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಕಚೇರಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ಶಿವಮೊಗ್ಗದ ವಕೀಲ ವಿನೋದ್ ಬಿ ಅವರು 2012ರಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು. ಈ ಪ್ರಕರಣವು ನಂತರ ಹಲವು ತಿರುವುಗಳನ್ನು ಪಡೆದಿತ್ತು. ಬೆಂಗಳೂರಿನ ವಿಶೇಷ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ...