ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಬಹುನಿರೀಕ್ಷಿತ ಸಿಹಿಸುದ್ದಿ ನೀಡಿದೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವ ಬರೋಬ್ಬರಿ 6,770 ‘ಡಿ’ ದರ್ಜೆ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಿದೆ. ಈ ನೇಮಕಾತಿ ಪ್ರಕ್ರಿಯೆಯು ಹೊರಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ರಾಜ್ಯದ ಆರೋಗ್ಯ ಸೇವೆಗಳನ್ನು ಇನ್ನಷ್ಟು ಬಲಪಡಿಸುವ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ...