ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ತಜ್ಞರು ನಡೆಸಿದ ಇತ್ತೀಚಿನ ಅಧ್ಯಯನವೊಂದು ಆಘಾತಕಾರಿ ಸಂಗತಿಯನ್ನು ಬಯಲು ಮಾಡಿದೆ. ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿರುವ ಮೊಬೈಲ್ ಬಳಕೆ (Mobile Addiction) ಕೂಡ ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮೊಬೈಲ್ ಗೀಳಿನಿಂದ ಹೃದಯಕ್ಕೆ ಕುತ್ತು! ಕೋವಿಡ್-19 ಸಾಂಕ್ರಾಮಿಕದ ನಂತರ ಜನರಲ್ಲಿ ಮೊಬೈಲ್ ಬಳಕೆಯ ಗೀಳು ಗಣನೀಯವಾಗಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಾದ ರೀಲ್ಸ್, ವ್ಲಾಗ್‌ಗಳು ಮತ್ತು ಇತರ...
