ಶಿವಮೊಗ್ಗ: ಅಂಧಶ್ರದ್ಧೆ ಮತ್ತು ಮೂಢನಂಬಿಕೆಗಳು ಎಷ್ಟರಮಟ್ಟಿಗೆ ಮಾನವ ಜೀವಕ್ಕೆ ಕುತ್ತು ತರಬಹುದು ಎಂಬುದಕ್ಕೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆಯಲ್ಲಿ ನಡೆದ ಘಟನೆಯೇ ಸಾಕ್ಷಿ. “ದೆವ್ವ ಬಿಡಿಸುವ” ನೆಪದಲ್ಲಿ ನಡೆದ ಭೀಕರ ಹಲ್ಲೆಯಿಂದ 45 ವರ್ಷದ ಗೀತಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣವನ್ನು ಮುಚ್ಚಿಹಾಕಲು ನಡೆದ ಯತ್ನವೂ ವಿಫಲವಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಟಗಾತಿ ಆಶಾ ಅಲಿಯಾಸ್ ಶಾಂತಮ್ಮ ಮತ್ತು ಆಕೆಯ ಪತಿ ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಹೊಸ ಜಂಬರಗಟ್ಟೆ ಗ್ರಾಮದ ಗೀತಮ್ಮ...