ಶಿವಮೊಗ್ಗ; ಮಳೆಗಾಲದ ಹಿನ್ನೆಲೆಯಲ್ಲಿ ಮಣ್ಣುಕುಸಿತದ ಆತಂಕದಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರ ಘಾಟ್ (ಹುಲಿಕಲ್ ಘಾಟ್) ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮೇ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬಾಳೆಬರ ಘಾಟ್‌ನ ಹೇರ್ ಪಿನ್ 3ರ ತಿರುವಿನಲ್ಲಿ (ಸರಪಳಿ 42.10 ರಿಂದ 42.20) ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣು ಕುಸಿತ...