ಶಿವಮೊಗ್ಗ: ರಾಗಿಗುಡ್ಡದ ಬಂಗಾರಪ್ಪನವರ ಕಾಲೋನಿಯಲ್ಲಿ ವಿಗ್ರಹಗಳ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ: ದೇವಸ್ಥಾನದ ವಿಗ್ರಹಗಳನ್ನು ಒದ್ದು ಹಾನಿ ಮಾಡಿರುವ ಘಟನೆಯಿಂದ ರೊಚ್ಚಿಗೆದ್ದ ಈಶ್ವರಪ್ಪ, ಕೂಡಲೇ ವಿವಾದಿತ ಸ್ಥಳದ ಎದುರಿಗಿರುವ ಒತ್ತುವರಿ ಕಟ್ಟಡವನ್ನು ಮಹಾನಗರ ಪಾಲಿಕೆಯವರು ಶೀಘ್ರದಲ್ಲಿ ತೆರವುಗೊಳಿಸಬೇಕು ಎಂದು ಸ್ಥಳದಲ್ಲಿಯೇ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು. ಸೋಮವಾರ ಸಂಜೆಯೊಳಗೆ...