ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ ! ಶಿವಮೊಗ್ಗ : ಲೋಕಸಭಾ ಚುನಾವಣ ದಿನಾಂಕ ಘೋಷಣೆಗೆ ಕೆಲ ದಿನ ಮಾತ್ರ ಬಾಕಿ. ಚುನಾವಣೆ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂಡಿಯಾ ಮೈತ್ರಿಯ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳಿಸಿರುವ ಕಾಂಗ್ರೆಸ್ ಇದೀಗ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಚುನಾವಣಾ ಸಮಿತಿಯ...