ಶಿವಮೊಗ್ಗ: ಹೊಸನಗರ ತಾಲೂಕಿನ ತಹಶೀಲ್ದಾರ್ ಆಗಿ ಉತ್ತಮ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದ ರಶ್ಮಿ ಹಾಲೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಶ್ಮಿ ಹಾಲೇಶ್ ಅವರು ಇನ್ನು ಮುಂದೆ ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದಿನಾಂಕ 08-11-2023 ರಂದು ಹೊಸನಗರ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್, ತಮ್ಮ ಅಲ್ಪಾವಧಿಯ ಸೇವಾವಧಿಯಲ್ಲೇ ದಕ್ಷ...