ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್...
ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು !
ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು ! ಶಿವಮೊಗ್ಗ : ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ 31 ವರ್ಷದ ಕೇಸ್ ಗಳನ್ನ ರೀ ಓಪನ್ ಮಾಡಿ ಬಂಧನ ಮಾಡಿರುವುದನ್ನ ಖಂಡಿಸಿ, ಇಂದು ಜಿಲ್ಲಾ ಬಿಜೆಪಿ ಘಟಕದಿಂದ ಎಸ್ ಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗಿದೆ. ನಾನು ಕರೆಸೇವಕ ನನ್ನನ್ನು ಬಂಧಿಸಿ ಎಂಬ ಪ್ಲೇಕಾರ್ಡ್ ಹಿಡಿದು ನೂರಾರು ಕಾರ್ಯಕರ್ತರು ಶಿವಮೊಗ್ಗ ಎಸ್ ಪಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ...
BREAKING NEWS : ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತ ! ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್ !
BREAKING NEWS : ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತ ! ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್ ! ಶಿವಮೊಗ್ಗ : ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತವಾಗಿದೆ. ಎದುರಿನಿಂದ ಬರುತ್ತಾ ಇದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ, ಪ್ರಯಾಣಿಕರಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಸಾಗರ ರಸ್ತೆಯ ಗಿಳಾಲ ಗುಂಡಿ ಬಳಿ ಈ ಘಟನೆ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ...
ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು !
ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು ! ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನೀಚಡಿಯಲ್ಲಿ ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55) ಮೃತ ದುರ್ದೈವಿ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ...
ಅತಿಥಿ ಉಪನ್ಯಾಸಕರ ಮುಷ್ಕರ : ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ತರಗತಿಗಳು ನಡೆಯುತ್ತಿಲ್ಲ – ವಿದ್ಯಾರ್ಥಿನಿಯರಿಂದ ಉಪವಿಭಾಗಧಿಕಾರಿಗಳಿಗೆ ಮನವಿ
ಅತಿಥಿ ಉಪನ್ಯಾಸಕರ ಮುಷ್ಕರ : ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ತರಗತಿಗಳು ನಡೆಯುತ್ತಿಲ್ಲ – ವಿದ್ಯಾರ್ಥಿನಿಯರಿಂದ ಉಪವಿಭಾಗಧಿಕಾರಿಗಳಿಗೆ ಮನವಿ ಸಾಗರ : ಅತಿಥಿ ಉಪನ್ಯಾಸಕರ ಮುಷ್ಕರದಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ನಮ್ಮ ಕಲಿಕೆಗೆ ಪೆಟ್ಟು ಬೀಳುತ್ತಿದೆ, ತರಗತಿಗಳು ನಡೆಯುತ್ತಿಲ್ಲ ಎಂದು ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸರ್ಕಾರ ತಕ್ಷಣ ಅವರ ಬೇಡಿಕೆ ಈಡೇರಿಸಿ ಎಂದಿನಂತೆ ತರಗತಿಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಬುಧವಾರ ವಿದ್ಯಾರ್ಥಿನಿಯರು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು....
ಕನ್ನಡಪರ ಹೋರಾಟಗಾರರ ಸಾಂಸ್ಕತಿಕ ನೆಲದಲ್ಲಿ ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ ನಂಗನಾಚ್ ನೃತ್ಯ!
ಕನ್ನಡಪರ ಹೋರಾಟಗಾರರ ಸಾಂಸ್ಕತಿಕ ನೆಲದಲ್ಲಿ ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ ನಂಗನಾಚ್ ನೃತ್ಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ ಮಾಡಿ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ ಯುವತಿ ಕುಣಿದಿದ್ದಾಳೆ. ಆನಂದಪುರದ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಹೇಸರಿನ ಸಂಘಟನೆಯೊಂದರ ಕಾರ್ಯಕ್ರಮ ಇದಾಗಿದ್ದು. ಈ ಬಗ್ಗೆ ಪೊಲೀಸ್ ಇಲಾಖೆಗೆ ಯಾವ ಕ್ರಮ ತೆಗೆದುಕೊಳ್ಳುತ್ತದೇಯೋ ಕಾದು ನೋಡಬೇಕಾಗಿದೆ ಸೋಮಶೇಖರ್ ಲ್ಯಾವಗಿರಿ ಮಕ್ಕಳನ್ನು ಅಶ್ಲೀಲತೆಗೆ ಸಂಬಂಧಿಸಿದ ಯಾವುದೆ ವಿಚಾರದಲ್ಲಿಯು...