ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ, ಕುಲಪತಿಗಳಿಗೆ ಸಮಗ್ರ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ್ದಾರೆ. ಜ್ಞಾನ ಸಹ್ಯಾದ್ರಿ, ಶಂಕರಘಟ್ಟದಲ್ಲಿರುವ ವಿ.ವಿ. ಆವರಣದಲ್ಲಿರುವ ಕುಲಪತಿಗಳ ಕಚೇರಿಗೆ ವಿದ್ಯಾರ್ಥಿಗಳು ಖುದ್ದು ತೆರಳಿ ಈ ಮನವಿಯನ್ನು ಸಲ್ಲಿಕೆ ಮಾಡಿದ್ದು, ತಮ್ಮ ಬೇಡಿಕೆಗಳ ಬಗ್ಗೆ ವಿಶ್ವವಿದ್ಯಾಲಯವು ತಕ್ಷಣ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳು ಮತ್ತು ಅದರ...