ತೀರ್ಥಹಳ್ಳಿ : ಮಂಡಗದ್ದೆ ಸಮೀಪ ಖಾಸಗಿ ಲಾರಿ ಹಾಗೂ ಕೆಎಸ್‌ಆರ್’ಟಿ ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್’ಟಿಸಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಖಾಸಗಿ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಎಸ್‌ಆರ್’ಟಿ ಸಿ ಬಸ್ಲಾಗೂ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣಾ...
Tag: Shimoganews
ಸಹ್ಯಾದ್ರಿ ಕಾಲೇಜ್ ಹಿಂಬಾಗ ನಾಲ್ವರು ಯುವಕರು ಅರೆಸ್ಟ್ ! ಕಾರಣ ಏನು ?
ಶಿವಮೊಗ್ಗ : ಸಹ್ಯಾದ್ರಿ ಕಾಲೇಜ್ ಹಿಂಭಾಗ ಮೊಟಾಳು ಚೌಡಮ್ಮ ದೇವಸ್ಥಾನದ ಸಮೀಪ ಮತ್ತೂರಿನ ರಸ್ತೆಯಲ್ಲಿ ನಾಲ್ಕು ಜನ ಯುವಕರು ಗಾಂಜಾ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ನೆನ್ನೆ ಭಾನುವಾರ ಮಧ್ಯಾಹ್ನದ ಸುಮಾರಿಗೆ ಶಿವಮೊಗ್ಗ ಎಸ್ ಪಿ ಜಿ ಕೆ ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಕಾರಿಯಪ್ಪ ಎ ಜಿ, ಮಾರ್ಗದರ್ಶನದಲ್ಲಿ ಜಯನಗರ ಪೊಲೀಸ್ ಠಾಣೆಯ ಪಿ ಐ ಸಿದ್ದೇಗೌಡ...
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !
ಉದ್ಯೋಗ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (Karnataka State Fire and Emergency Services – KSFES) ಇಲಾಖೆಯು 975 ಫೈರ್‌ಮ್ಯಾನ್, ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಅಗ್ನಿಶಾಮಕ ಇಂಜಿನ್ ಡ್ರೈವರ್ ಹುದ್ದೆಗಳಿಗೆ KSFES ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಕಿರು ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್ ksfes.karnataka.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ KSFES ನೇಮಕಾತಿ 2024 ಗಾಗಿ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಪರಿಶೀಲಿಸಬಹುದು: ಖಾಲಿ ಹುದ್ದೆ,...
ಅಡಿಕೆ ತೋಟದಲ್ಲಿ ಗಾಂಜಾ ಘಾಟು ! ಪೊಲೀಸರ ಭರ್ಜರಿ ಕಾರ್ಯಾಚರಣೆ !
ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ ಶಿವಮೊಗ್ಗ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ, ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷ ಗಜಾನನ ವಾಮನ ಸುತರ, ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡ ಸ್ಥಳಕ್ಕೆ ದಾಳಿ ನಡೆಸಿತ್ತು. ಸ್ಥಳಕ್ಕೆ...
ಗೋ ಹತ್ಯೆ, ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ, ಬಜರಂಗದಳ ಎಸ್ ಪಿ ಗೆ ಮನವಿ
ಶಿವಮೊಗ್ಗ : ಬಕ್ರೀದ್ ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಬಜರಂಗದಳ ಮತ್ತು ವಿಹೆಚ್ ಪಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಅವರಿಗೆ ಮನವಿ ಸಲ್ಲಿಸಿದೆ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ( ಯಾವುದೇ ರೀತಿಯ ಹತ್ಯೆ ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ...
BIG BREAKING NEWS : ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೇಸ್ಟ್ !
ಬೆಂಗಳೂರು : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಬೆಳಗಿನ ಜಾವ ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.. ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ ಇದನ್ನೂ...
ಶಿವಮೊಗ್ಗ : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ !
ಶಿವಮೊಗ್ಗ : ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಪ್ರವೇಶ ಸೀಟುಗಳನ್ನು ಭರ್ತಿ ಮಾಡಲು ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಆಧಾರಿತವಾಗಿ ಆಫ್‍ಲೈನ್ ಮೂಲಕ ಜೂ.10 ರಿಂದ 25 ರವರೆಗೆ ಅರ್ಜಿ...
ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ !
ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಇಬ್ಬರಿಗೆ ಚೂರಿ ಇರಿಯಲಾಗಿದೆ,...
ಸಾಗರ ರಸ್ತೆಯಲ್ಲಿ ಮತ್ತೊಂದು ಬಸ್ ಅಪಘಾತ ! ಕಾರು ಬಸ್ ಮುಖಾಮುಖಿ ಡಿಕ್ಕಿ !
ಸಾಗರ : ಆನಂದಪುರದ ಸಮೀಪದ ಉಳ್ಳೂರಿನ ಹಕ್ರೆ ಕೊಪ್ಪ ರಸ್ತೆಯ ತಿರುವಿನ ಬಳಿ ಗುರುರಾಜ ಎಂಬ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಗುರುರಾಜ ಎಂಬ ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹಾಗೂ ಶಿವಮೊಗ್ಗದಿಂದ ಸಾಗರಕ್ಕೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಇದರಿಂದ ಕಾರಿನಲ್ಲಿದ್ದ ಚಾಲಕನಿಗೆ ತೀವ್ರವಾದ ಪೆಟ್ಟಾಗಿದ್ದು. ತಕ್ಷಣ ಇವರನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಬಸ್ಸಿ ನಲ್ಲಿದ್ದ 20ಕ್ಕೆ ಹೆಚ್ಚು ಪ್ರಯಾಣಿಕರಿಗೆ ಯಾವುದೇ ರೀತಿಯ ಹಾನಿ...
ದೊಡ್ಮನೆ ಕುಟುಂಬದಲ್ಲಿ ಮೊದಲ ಡಿವೋರ್ಸ್ : ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಯುವರಾಜ್ ಕುಮಾರ್ !
ಬೆಂಗಳೂರು : ಸ್ಯಾಂಡಲ್‌ವುಡ್ ಕ್ಯೂಟ್ ಕಪಲ್ ಎಂದು ಹೆಸರುವಾಸಿಯಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತ ವಿಚ್ಛೇಧನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚ್ಛೇಧನ ಪ್ರಕರಣ ಬೆಳಕಿಗೆ ಬಂದಿದೆ. ಸ್ಯಾಂಡಲ್‌ವುಡ್ ನ ದೊಡ್ಡನೆ ಎಂದು ಕೆರಸಿಕೊಳ್ಳುವ ಡಾ.ರಾಜ್ ಕುಮಾರ್‌ರ ಕುಟುಂಬದಲ್ಲಿ ಈಗ ಮೊದಲ ಡಿವೋರ್ಸ್ ಕೇಸ್ ದಾಖಲಾಗಿದೆ. ಸ್ಯಾಂಡಲ್‌ವುಡ್ ನ ದೊಡ್ಡ್ಮನೆ ಎಂದು ಕೆರಸಿಕೊಳ್ಳುವ ಡಾ.ರಾಜ್ ಕುಮಾರ್‌ರ ಕುಟುಂಬದಲ್ಲಿ ಈಗ ಮೊದಲ ಡಿವೋರ್ಸ್ ಕೇಸ್ ದಾಖಲಾಗಿದೆ.ಯುವ ಸಿನಿಮಾದ ಮೂಲಕ ಸ್ಯಾಂಟಲ್‌ವುಡ್ ಗೆ ಭರ್ಜರಿ ಎಂಟ್ರಿ ಕೊಟ್ಟು ಮೊದಲ ಸಿನಿಮಾದಲ್ಲೇ...