ಕೋವಿಡ್ ರೂಪಾಂತರಿ ಆತಂಕಕಾರಿಯಲ್ಲ -ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಶಿವಮೊಗ್ಗ: ಇತ್ತೀಚೆಗೆ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಪ್ರಕಟಿಸಿದಂತೆ ಕೋವಿಡ್ ಜೆಎನ್ 1 ರೂಪಾಂತರ ತಳಿ ಆತಂಕಕಾರಿಯಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಹೇಳಿದರು. ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕೋವಿಡ್ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ,...