ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ, ಲೋಕಸಭಾ ಚುನಾವಣೆಯ ಸ್ಪರ್ಧಿಗಳ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಶಿವಮೊಗ್ಗ ಲೋಕಸಮರಕ್ಕೆ ತೆರೆ ಬಿದ್ದಿದೆ. ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದು,ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
Tag: Shivamoggaexpressnews
ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಶಿವಮೊಗ್ಗದಲ್ಲಿ ಮತ ಚಲಾಯಿಸುವ ಎರಡು ವಿಡಿಯೋ ವೈರಲ್ !
ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಮತ ಚಲಾಯಿಸುವ ವಿಡಿಯೋ ಒಂದು ವೈರಲ್ ಆಗಿದೆ ಮತದಾನದ ವೀಡಿಯೋ, ಪೋಟೋ ತೆಗೆದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿಯೂ ಎಚ್ಚರಿಕೆ ನೀಡಿತ್ತು. ಆದರೂ ಎರಡು ವಿಡಿಯೋ ವೈರಲ್ ಆಗುತ್ತಿದೆ ಒಂದು ವಿಡಿಯೋ ಭದ್ರಾವತಿಯ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ಬಳಿಕ ವಿಡಿಯೋ ಮಾಡಿಕೊಂಡು...
ದುರ್ಗಿಗುಡಿ ಮತ ಕೇಂದ್ರದ ಬಳಿ ಪ್ರತಿಭಟನೆ ! ಕಾರಣವೇನು ?
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ದುರ್ಗಿಗುಡಿ ಮತ ಕೇಂದ್ರದ ಬಳಿ ಸರ್ವ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ, ಮತಚಲಾವಣೆಗೆ ಹೆಚ್ಚುವರಿ ಕಾಲವಕಾಶ ನೀಡಬೇಕೆಂದು ಮತಗಟ್ಟೆಯ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ ಪ್ರತಿಭಟನೆಗೆ ಕಾರಣವೇನು ? ದುರ್ಗಿಗುಡಿ ಶಾಲಾ ಮತ ಕೇಂದ್ರದಲ್ಲಿ ಮತ ಯಂತ್ರದ ತಾಂತ್ರಿಕ ದೋಷದ ಕಾರಣ ಅರ್ಧ ಗಂಟೆ ತಡವಾಗಿ ಮತದಾನ ಪ್ರಾರಂಭವಾಗಿತ್ತು, ಬೆಳಗ್ಗೆ 07 ಗಂಟೆಗೆ ಶುರುವಾಗಬೇಕಿದ್ದ ಮತದಾನ 7:30 ಕ್ಕೆ ಶುರುವಾಗಿತ್ತು. ಮತದಾನ ಮಾಡಲು ಹೆಚ್ಚುವರಿ ಅರ್ಧ ಗಂಟೆಗಳ ಕಾಲಾವಕಾಶ ನೀಡುವುದಾಗಿ ಭರವಸೆ...
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ! ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ! ದೂರಿನಲ್ಲಿ ಏನಿದೆ ?
ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಹಳೆಯ ವಿಡಿಯೋ ಒಂದು ಹರಿದಾಡುತ್ತಿತ್ತು, ಈ ಬಗ್ಗೆ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ. ಜೊತೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೂ ದೂರು ನೀಡಿದ್ದಾರೆ. ಮಾಜಿ ಸಚಿವ ಕೆ...
ವೋಟ್ ಮಾಡಲು ಹೋಗುತ್ತಿದ್ದ ಯುವಕ ಸಾವು !
ಶಿಕಾರಿಪುರ : ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಶಿಕಾರಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮತದಾನ ಹಿನ್ನೆಲೆಯಲ್ಲಿ ಬೈಕ್ ಸವಾರ ಮತದಾನ ಮಾಡಲು ತೇರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಶಿವಮೊಗ್ಗದಲ್ಲಿ ಅರಮನೆಯಂತೆ ಸಿಂಗಾರಗೊಂಡ ಮತಕೇಂದ್ರ ! ಮತ ಹಾಕಿದವರಿಗೆ ಕಿರೀಟ !
ಶಿವಮೊಗ್ಗ : ನಗರದಲ್ಲಿ ಮತದಾರರನ್ನು ಸೆಳೆಯಲು ಅರಮನೆಯಂತೆ ಮತಕೇಂದ್ರ ಸಿಂಗಾರಗೊಂಡಿದೆ , ಶಿವಮೊಗ್ಗದ ಜಿಲ್ಲಾ ಪಂಚಾಯತ್ ನ ಮತದಾನ ಕೇಂದ್ರದಲ್ಲಿ ವಿಭಿನ್ನ ಪ್ರಯತ್ನ ನಡೆದಿದೆ. ಮತದಾನಕ್ಕೆ ಬರುವವರಿಗೆ ಇಲ್ಲಿ ವಿಶೇಷ ವೆಲ್ ಕಂ ಮಾಡಲಾಗುತ್ತಿದೆ. ಮತದಾರರೇ ಪ್ರಭುಗಳು ಎಂಬ ದ್ಯೇಯವಾಕ್ಯದಡಿಯಲ್ಲಿ ಈ ಮತಗಟ್ಟೆ ನಿರ್ಮಿಸಲಾಗಿದೆ. ಪ್ರಭು. ರಾಜ ಪೋಷಾಕಿನ ವೇಷದಲ್ಲಿ ಚುನಾವಣ ಅಧಿಕಾರಿಗಳು ಮಿಂಚುತ್ತಿದ್ದಾರೆ, ಇಬ್ಬರು ಪುರುಷ, ಮೂವರು ಮಹಿಳಾ ಸಿಬ್ಬಂದಿ ವಿಭಿನ್ನವಾಗಿ ರೆಡಿಯಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಶಿಕಾರಿಪುರದಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ !
ಶಿವಮೊಗ್ಗ : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬಸ್ಥರೊಂದಿಗೆ ಮತದಾನ ಮಾಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮತಗಟ್ಟೆಗೆ...
ಎರಡನೇ ಹಂತದ ಲೋಕಸಭೆ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ !
ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಈ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ 6ಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಈಗಾಗಲೇ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ. ಇಂದು ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ಬೃಹತ್ ವೇದಿಕೆ ಕಾರ್ಯಕ್ರಮಗಳಿಗಿಂತ ರ್‍ಯಾಲಿ, ರೋಡ್ ಶೋಗಳ ಭರಾಟೆ ಇರಲಿದೆ. ಮತದಾನದ 48...
ಮೇ 7 ಕ್ಕೆ ಮತದಾನ : ಅಂತಿಮ ಹಂತದ ಸಿದ್ಧತೆ ಪೂರ್ಣ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮೇ 7ರಂದು ನಡೆಯುವ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ‘ಗರಿಷ್ಠ 1,500 ಮತದಾರರನ್ನು ಒಳಗೊಂಡಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು !
ಶಿವಮೊಗ್ಗ : ಹೊಸನಗರ ತಾಲೂಕ್ಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ನೆನ್ನೆ ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...